ಸಾರಾಂಶ
- - -
- 1991ರಲ್ಲಿ ಶಿಕಾರಿಪುರ ಪಟ್ಟಣದ ಸಾಲೂರು ರಸ್ತೆಯ ಟಿಎಪಿಸಿಎಂಎಸ್ ಸಮೀಪದಲ್ಲಿ ಪ್ರಾಥಮಿಕ ಶಾಲೆ ಆರಂಭ- 1992ರಲ್ಲಿ ಪ್ರೌಢಶಾಲೆ ಆರಂಭಿಸಿ, ಅಶಕ್ತರು, ಬಡವರು, ನಿರ್ಗತಿಕ, ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ
- 2011-12 ರಲ್ಲಿ ಗ್ರಾಮೀಣ ಪ್ರತಿಭಾನ್ವಿತ ಮಕ್ಕಳಿಗೆ ಪೂರಕವಾಗಿ ಪ್ಯಾರಾ ಮೆಡಿಕಲ್ ಕಾಲೇಜು ಆರಂಭ- - - ಕನ್ನಡಪ್ರಭ ವಾರ್ತೆ, ಶಿಕಾರಿಪುರ
ಪಟ್ಟಣದ ಬಾಪೂಜಿ ಶಿಕ್ಷಣ ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಶಿಕ್ಷಣ ಸಂಸ್ಥೆಯ ಪ್ರಶಸ್ತಿ ನಗದು ಬಹುಮಾನ ಹಾಗೂ ಪಾರಿತೋಷಕವನ್ನು ಪಡೆದಿದೆ ಎಂದು ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಬಿ.ಪಾಪಯ್ಯ ಹೇಳಿದರು.ಸೋಮವಾರ ಪಟ್ಟಣದ ಸುದ್ದಿಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1991ರಲ್ಲಿ ಪಟ್ಟಣದ ಸಾಲೂರು ರಸ್ತೆಯಲ್ಲಿನ ಟಿಎಪಿಸಿಎಂಎಸ್ ಸಮೀಪದಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಶಾಲೆಯ ಮೂಲಕ ಆರಂಭವಾಗಿದೆ. 1992ರಲ್ಲಿ ಪ್ರೌಢಶಾಲೆಯನ್ನು ಆರಂಭಿಸಿ, ಸತತ 33 ವರ್ಷಗಳಿಂದ ಸಮಾಜದಲ್ಲಿನ ಅಶಕ್ತರು, ಬಡವರು, ನಿರ್ಗತಿಕ, ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ಜತೆಗೆ ವಸತಿ ಸೌಲಭ್ಯದ ಮೂಲಕ ಎಲ್ಲ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದೆ ಎಂದರು.
ಅತ್ಯಂತ ವೆಚ್ಚದಾಯಕ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪದವಿಪೂರ್ವ ಶಿಕ್ಷಣವನ್ನು ಗುಣಮಟ್ಟದಲ್ಲಿ ಸಾವಿರಾರು ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿದೆ. 2011-12 ರಲ್ಲಿ ಗ್ರಾಮೀಣ ಪ್ರತಿಭಾನ್ವಿತ ಮಕ್ಕಳಿಗೆ ಅನುಕೂಲ ಕಲ್ಪಿಸುವ ದಿಸೆಯಲ್ಲಿ ವೈದ್ಯಕೀಯ ಶಿಕ್ಷಣ ಸುಲಭದಲ್ಲಿ ದೊರಕಿಸಿಕೊಡಲು ಪ್ಯಾರಾ ಮೆಡಿಕಲ್ ಕಾಲೇಜು ಆರಂಭಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಟ್ಟ ಹಿರಿಮೆಗೆ ಶಿಕ್ಷಣ ಸಂಸ್ಥೆ ಪಾತ್ರವಾಗಿದೆ ಎಂದು ತಿಳಿಸಿದರು.ಸಂಸ್ಥೆಯ ಸತತ 3 ದಶಕದ ಸಾಧನೆಯನ್ನು ಪರಿಶೀಲಿಸಿ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯ ಮಟ್ಟದಲ್ಲಿ 5 ಸಂಸ್ಥೆಗಳಿಗೆ ನೀಡುವ ಉತ್ತಮ ಶಿಕ್ಷಣ ಸಂಸ್ಥೆ ಪ್ರಶಸ್ತಿಗೆ ಈ ಬಾರಿ ಬಾಪೂಜಿ ಶಿಕ್ಷಣ ಸಂಸ್ಥೆ ಭಾಜನವಾಗಿದೆ. ನ.23ರಂದು ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿನ ಬಾಲಭವನದಲ್ಲಿ ನಡೆದ ಮಕ್ಕಳ ದಿನ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ₹1 ಲಕ್ಷ ನಗದು, ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಿದ್ದಾರೆ ಎಂದ ಅವರು, ಸಂಸ್ಥೆಯ ಸಾಧನೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶ್ರಮಿಸಿದ ಸರ್ವರಿಗೂ ಅಭಿನಂದಿಸುವುದಾಗಿ ತಿಳಿಸಿದರು.
ಡಿ.22ರಂದು ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸಂಸ್ಥೆಯ ಪ್ರಗತಿಗಾಗಿ ಶ್ರಮಿಸಿದ ಸರ್ವರಿಗೂ ಹಳೆಯ ವಿದ್ಯಾರ್ಥಿಗಳು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಸ್ಥೆಯ ಎಲ್ಲ ಹಳೆಯ ವಿದ್ಯಾರ್ಥಿಗಳು ಸಾರ್ವಜನಿಕರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಕಾರ್ಯದರ್ಶಿ ಪವಿತ್ರ, ಪಿಯು ಕಾಲೇಜಿನ ಪ್ರಾಚಾರ್ಯ ಮುಸ್ತಾಫ, ಪ್ರೌಢಶಾಲೆ ಮುಖ್ಯೋಪಾಧ್ಯಾಯ ರಾಘವೇಂದ್ರ ಕುಲಕರ್ಣಿ ಉಪಸ್ಥಿತರಿದ್ದರು.
- - - -27ಕೆ.ಎಸ್.ಕೆ.ಪಿ1:ಶಿಕಾರಿಪುರದ ಬಾಪೂಜಿ ಶಿಕ್ಷಣ ಸಂಸ್ಥೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಣ ಸಂಸ್ಥೆ ಪ್ರಶಸ್ತಿಯನ್ನು ಸಂಸ್ಥಾಪಕ ಅಧ್ಯಕ್ಷ ಪಾಪಯ್ಯ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರಿನ ಬಾಲಭವನದಲ್ಲಿ ವಿತರಿಸಿ ಗೌರವಿಸಿದರು.