ಬಾಪೂಜಿ ಪ್ರಬಂಧ ಸ್ಪರ್ಧೆ: ಸಾಕ್ಷಿ, ರಕ್ಷಿತಾ, ಭೀಮಾಂಬಿಕಾ ಪ್ರಥಮ

| Published : Oct 01 2024, 01:39 AM IST

ಸಾರಾಂಶ

ಗಾಂಧೀ ಜಯಂತಿ ಅಂಗವಾಗಿ, ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 155ನೇ ಜಯಂತಿ ಅಂಗವಾಗಿ, ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ವಿಜೇತರಾದ ವಿವರ ಇಂತಿವೆ:

ಪ್ರೌಢಶಾಲಾ ವಿಭಾಗ: ಕಾರ್ಕಳ ಕಾಬೆಟ್ಟುವಿನ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ ಕುಲಾಲ್ ಪ್ರಥಮ, ಬ್ರಹ್ಮಾವರದ ಮಣೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೈತ್ರಿ ದ್ವಿತೀಯ ಹಾಗೂ ಉಡುಪಿ ಸರ್ಕಾರಿ ಬಾಲಕಿಯರ ಪಪೂ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿ 9ನೇ ತರಗತಿಯ ಶಿವಾನಿ ತೃತೀಯ ಸ್ಥಾನ ಪಡೆದಿರುತ್ತಾರೆ.ಪದವಿ ಪೂರ್ವ ಶಿಕ್ಷಣ ವಿಭಾಗ: ಹೆಮ್ಮಾಡಿ ಜನತಾ ಪಿಯು ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಪ್ರಥಮ, ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪನ್ನಿಧಿ ಡಿ. ಶೆಟ್ಟಿ ದ್ವಿತೀಯ ಹಾಗೂ ಉಡುಪಿಯ ಎಂ.ಜಿ.ಎಂ. ಪಪೂ ಕಾಲೇಜಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ದಿವ್ಯ ತೃತೀಯ ಸ್ಥಾನ ಪಡೆದಿರುತ್ತಾರೆ.ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ತೃತೀಯ ಬಿಎ ವಿದ್ಯಾರ್ಥಿನಿ ಭೀಮಾಂಬಿಕಾ ಪ್ರಥಮ, ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಅಮಿಷಾ ದ್ವಿತೀಯ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ತೃತೀಯ ಬಿಎ ವಿದ್ಯಾರ್ಥಿನಿ ಅಶ್ವಿನಿ ಡಿ.ಎಸ್. ತೃತೀಯ ಸ್ಥಾನ ಪಡೆದಿರುತ್ತಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.