ಬೀಳಗಿ: 2025-26ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಾಡಗಂಡಿಯ ಎಸ್‌.ಆರ್‌. ಪಾಟೀಲ ಶಿಕ್ಷಣ ಪ್ರತಿಷ್ಠಾನದ ಬಾಪೂಜಿ ಸ್ವತಂತ್ರ ಪಪೂ ಕಾಲೇಜು ಪ್ರತಿಶತ ನೂರರಷ್ಟು ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಕಾಲೇಜಿನ 163 ವಿದ್ಯಾರ್ಥಿಗಳಲ್ಲಿ 98 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ , ಉಳಿದವರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿನಿ ಲಕ್ಷ್ಮೀ ಗೋಪಾಲ ಬಿರಾದಾರ 590 ಅಂಕ ಗಳಿಸಿ ರಾಜ್ಯಕ್ಕೆ 9ನೇ , ಲಕ್ಷ್ಮೀ ಲಕ್ಷ್ಮಣ ಬಿರಾದಾರ 589 ಅಂಕ ಪಡೆದು ರಾಜ್ಯಕ್ಕೆ 10ನೇ ರ್‍ಯಾಂಕ್‌ ಹಾಗೂ ಪವನಕುಮಾರ ಮಲ್ಲೂರ 587 ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಪ್ರತಿಶತ ನೂರರಷ್ಟು ಫಲಿತಾಂಶ ದಾಖಲಿಸಿದ್ದು, 14 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಸಮರೀನ್‌ ರಿಯಾಜಹ್ಮದ್‌ ಬಾಗವಾನ 584 ಅಂಕ ಪಡೆದಿದ್ದಾರೆ.