ಸಾರಾಂಶ
ನಾಡೋಜ ಡಾ.ಬರಗೂರು ಪ್ರತಿಷ್ಠಾನ ಬೆಂಗಳೂರು ಅವರ ಸಹಯೋಗದೊಂದಿಗೆ ನಾಡೋಜ ಡಾ.ಬರಗೂರು ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಶಿರಾ
ನಾಡೋಜ ಡಾ.ಬರಗೂರು ಪ್ರತಿಷ್ಠಾನ ಬೆಂಗಳೂರು ಅವರ ಸಹಯೋಗದೊಂದಿಗೆ ನಾಡೋಜ ಡಾ.ಬರಗೂರು ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆ ಮತ್ತು ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ತಾಲೂಕಿನ ಬರಗೂರಿನ ಆಂಜನೇಯಸ್ವಾಮಿ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ಬೆಳಿಗ್ಗೆ 11-00 ಗಂಟೆಗೆ ಏರ್ಪಡಿಸಲಾಗಿದೆ.ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆ ನೆರವೇರಿಸುವರು. ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ಕೇಂದ್ರದ ಕಟ್ಟಡದ ಶಂಕುಸ್ಥಾಪನೆ, ಶಾಸಕ ಟಿ.ಬಿ. ಜಯಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಜೆ.ಸಿ. ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಭಾವಹಿಸುವರು. ಡಾ. ಬರಗೂರು ರಾಮಚಂದ್ರಪ್ಪ ಉಪಸ್ಥಿತರಿರುವರು.
7ಶಿರಾ2: ನಾಡೋಜ ಬರಗೂರು ರಾಮಚಂದ್ರಪ್ಪ