ಬಾರಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್‌ ಸರ್ಕಾರಿ ಕಾಲೇಜು ವಾರ್ಷಿಕ ಕ್ರೀಡಾಕೂಟ

| Published : Apr 17 2025, 12:06 AM IST

ಬಾರಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್‌ ಸರ್ಕಾರಿ ಕಾಲೇಜು ವಾರ್ಷಿಕ ಕ್ರೀಡಾಕೂಟ
Share this Article
  • FB
  • TW
  • Linkdin
  • Email

ಸಾರಾಂಶ

ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ವಾರ್ಷಿಕ ಕ್ರೀಡಾಕೂಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಬಾರಕೂರು ನ್ಯಾಷನಲ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ಶೆಟ್ಟಿ ಅವರು ಕ್ರೀಡಾಕೂಟ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬಾರಕೂರು

ಇಲ್ಲಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ವಾರ್ಷಿಕ ಕ್ರೀಡಾಕೂಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಬಾರಕೂರು ನ್ಯಾಷನಲ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ಶೆಟ್ಟಿ ಅವರು ಕ್ರೀಡಾಕೂಟ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಕ್ರೀಡೆಯಿಂದ ವ್ಯಕ್ತಿಯ ಜೀವನಕ್ಕೆ ಹಲವು ಉಪಯುಕ್ತ ಸಂದೇಶಗಳು ಸಿಗುತ್ತವೆ. ವೇಗ, ದೂರ ಮತ್ತು ಎತ್ತರ ಇವು ಮೂರು ಯಶಸ್ಸನ್ನು ಪಡೆಯಲು ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ. ಭಾಸ್ಕರ ಶೆಟ್ಟಿ ಸಲ್ವಾಡಿ ಅವರು, ಕ್ರೀಡೆಯಲ್ಲಿ ಸೋಲು ಗೆಲುವುಕ್ಕಿಂತ ಕ್ರೀಡಾಸ್ಪೂರ್ತಿ ಮುಖ್ಯ. ಶಿಸ್ತಿನ ಜೀವನ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿ. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ ಎಂದರು. ಮುಖ್ಯ ಅತಿಥಿ ಹನೆಹಳ್ಳಿ ಗ್ರಾಪಂ ಅಧ್ಯಕ್ಷೆ ಮಲ್ಲಿಕಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್ ಸಿ.ಕೆ., ದೈಹಿಕ ಶಿಕ್ಷಣ ನಿರ್ದೇಶಕಿ ಸುಮತಿ, ಬೋಧಕ ಬೋಧಕೇತರರು ಇದ್ದರು. ಗಣಕವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಲಕ್ಷಿತ್ ಪೂಜಾರಿ ಸ್ವಾಗತಿಸಿ, ದ್ವಿತೀಯ ಬಿಸಿಎ ವಿದ್ಯಾರ್ಥಿನಿ ರಕ್ಷಿತಾ ವಂದಿಸಿದರು. ಸಹಾಯಕ ಪ್ರಾಧ್ಯಾಪಕ ವೀರೇಶ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.