ಸಾರಾಂಶ
ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.
ಹೋಬಳಿಯ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅವ್ವೇರಹಳ್ಳಿ ಗ್ರಾಮದಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿ ಮಾತನಾಡಿದರು.‘ದೇಶದಲ್ಲಿ ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ 5 ವರ್ಷದ ಅವಧಿಗೂ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ಜಿಲ್ಲೆಯ ಹಾಲಿ ಸಂಸದರು ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಜಿಲ್ಲೆಯ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ ಸರ್ಕಾರದಿಂದ ಸುಮಾರು 16 ಸಾವಿರ ಕೋಟಿ ರು. ಹಣವನ್ನು ತಂದು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಮುಂಬರುವ 5 ವರ್ಷಗಳಲ್ಲಿ ಜಿಲ್ಲೆ ಹಾಗೂ ತಾಲೂಕಿನಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳಿಗೆ ಪ್ರಜ್ವಲ್ ರೇವಣ್ಣ ಆದ್ಯತೆ ನೀಡಬೇಕಾಗಿದೆ. ಈ ಚುನಾವಣೆಯಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ’ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯೆ ಲಕ್ಷ್ಮೀದೇವಿ ಜಯರಾಮ್, ಯುವ ಜೆಡಿಎಸ್ ಘಟಕದ ಅಧ್ಯಕ್ಷ ಅನಿಲ್ ಗೌಡ, ಮುಖಂಡರಾದ ಜಯರಾಮ್, ಶ್ರೀನಿವಾಸ್, ನಾಗೇಗೌಡ, ಶಂಕರ್, ಬೋರೇಗೌಡ, ಬಿಜೆಪಿ ಮುಖಂಡ ಸತೀಶ್, ವೆಂಕಟೇಶ್, ಹುಲಿಕೆರೆ ಸಂಪತ್ ಕುಮಾರ್, ಪುಟ್ಟಸ್ವಾಮಿ ಹಾಜರಿದ್ದರು.ನುಗ್ಗೇಹಳ್ಳಿ ಹೋಬಳಿಯ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅವೇರಹಳ್ಳಿ ಗ್ರಾಮದಲ್ಲಿ ಪ್ರಜ್ವಲ್ ರೇವಣ್ಣ ಪರ ಶಾಸಕ ಸಿ.ಎನ್.ಬಾಲಕೃಷ್ಣ ಮತಯಾಚಿಸಿದರು.