ಬಾರ್ಕೂರು-ಸಂವಿಧಾನ ಜಾಗೃತಿ ಜಾಥಾ ಸಂಪನ್ನ

| Published : Feb 10 2024, 01:47 AM IST

ಸಾರಾಂಶ

ಬ್ರಹ್ಮಾವರ ಮೆರಿನೊಲ್ ಪ್ರೌಢಶಾಲೆ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ (ಪ್ರಭಾರ) ಬಿ. ಶಾಂತರಾಮ ಶೆಟ್ಟಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಸಂವಿಧಾನ ದಿನಾಚರಣೆ ಪ್ರಯುಕ್ತ ಬಾರ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ನಡೆಯಿತು.

ಸ್ಥಳೀಯ ಮೆರಿನೊಲ್ ಪ್ರೌಢಶಾಲೆ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ (ಪ್ರಭಾರ) ಬಿ. ಶಾಂತರಾಮ ಶೆಟ್ಟಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಂದನಾ ಅವರು ಭಾರತ ಸಂವಿಧಾನದ ಪ್ರಸ್ತಾವನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಸಂವಿಧಾನ ಕುರಿತು ಏರ್ಪಡಿಸಲಾದ ಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಪ್ರದೀಪ್ ಕೊಂಡೋಜಿ, ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ ರೋಶನ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯಿತಿ ವ್ಯಾಪ್ತಿಯ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದ, ಎಸ್.ಎಲ್.ಆರ್.ಎಂ. ಸಂಘದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.