ಸಾರಾಂಶ
ಕೊರಟಗೆರೆ: ತಾಲೂಕಿನ ತೋವಿನಕೆರೆ ಗ್ರಾಮದ ರೈತನ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಬಿದ್ದು ಕೊಟ್ಟಿಗೆಯಲ್ಲಿದ್ದ 4 ಹಸುಗಳು ಹಾಗೂ 1 ಕರು ಸ್ಥಳದಲ್ಲಿಯೇ ಸಜೀವ ದಹನವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಕೊರಟಗೆರೆ: ತಾಲೂಕಿನ ತೋವಿನಕೆರೆ ಗ್ರಾಮದ ರೈತನ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಬಿದ್ದು ಕೊಟ್ಟಿಗೆಯಲ್ಲಿದ್ದ 4 ಹಸುಗಳು ಹಾಗೂ 1 ಕರು ಸ್ಥಳದಲ್ಲಿಯೇ ಸಜೀವ ದಹನವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಕೊರಟಗೆರೆ ತಾಲೂಕಿನ ಸಿ.ಎನ್. ದುರ್ಗಾ ಹೋಬಳಿಯ ತೋವಿನಕೆರೆ ಗ್ರಾಮದ ಕೊಂಡಪ್ಪ ಅವರ ಜಾನುವಾರು ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗಲಿ ಕೊಟ್ಟಿಗೆ ಒಳಗೆ ಇದ್ದ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಕೊಟ್ಟಿಯಲ್ಲಿದ್ದ 2 ಕರುಗಳ ಪೈಕಿ ಎರಡು ಕರುವನ್ನು ರಕ್ಷಣೆ ಮಾಡಲಾಗಿತ್ತು. ಆದರೆ ರಕ್ಷಣೆ ಮಾಡಲಾಗಿದ್ದ ಇನ್ನೊಂದು ಕರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಕೊಟ್ಟಿಗೆಗೆ ಬೆಂಕಿ ಬಿದ್ದ ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಶ್ರಮಿಸಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಾಗಭೂಷಣ್ ಸ್ಥಳಕ್ಕೆ ಭೇಟಿ ನೀಡಿ ಮೃತ ಹಸುಗಳ ರೈತನಿಗೆ ಸಾಂತ್ವನ ತಿಳಿಸಿ ಇಲಾಖೆಯಿಂದ ಸಿಗುವಂತಹ ಪರಿಹಾರ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.