ಸಾರಾಂಶ
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚೆನ್ನಮ್ಮ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಾರುಕೋಲು ಬೀಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ನಾಮಫಲಕದಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಕೆಗೆ ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಶುಕ್ರವಾರ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಾರುಕೋಲು ಹಿಡಿದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚೆನ್ನಮ್ಮ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಾರುಕೋಲು ಬೀಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಆದರೆ, ಇಂದಿಗೂ ಹಲವು ಕಡೆಗಳಲ್ಲಿ ಅಂಗಡಿ, ಮುಂಗಟ್ಟುಗಳು, ಮಾಲ್‌ಗಳ ಮೇಲೆ ಕನ್ನಡ ಭಾಷೆಯ ಬೋರ್ಡ್ ಬಳಸದೇ ಇರುವುದು ಖಂಡನಾರ್ಹ. ಇನ್ನೂ ಕೆಲವು ಕಡೆಗಳಲ್ಲಿ ಬೇರೆ ಬೇರೆ ಭಾಷೆಯ ಅಕ್ಷರಗಳನ್ನು ದೊಡ್ಡದಾಗಿ, ಕನ್ನಡ ಪದ ಕಾಣದಷ್ಟು ಚಿಕ್ಕದಾಗಿ ನಾಮಫಲಕ ಹಾಕಲಾಗಿರುತ್ತದೆ. ಇನ್ನು ಮುಂದೆ ಈ ರೀತಿಯ ಘಟನೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಕಡ್ಡಾಯವಾಗಿ ನಾಮಫಲಕದಲ್ಲಿ ಕನ್ನಡ ಭಾಷೆ ಅಳವಡಿಸಬೇಕು ಎಂದು ಒತ್ತಾಯಿಸಿದರು.ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಮಾವೇಶಗೊಂಡ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆಟೋ ಚಾಲಕರ ಸಂಘ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಧೋತಿ ತೊಟ್ಟು, ಬಾರಕೋಲುು ಹಿಡಿದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ನಂತರ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಹಲವು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.