ಸಾರಾಂಶ
ಕನ್ನಡಪ್ರಭ ವಾರ್ತೆ ನಾಗಮಂಗಲ
ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ತಾಲೂಕಿನ ಚಿಣ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಸೋಮವಾರ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.ಜಿಲ್ಲಾ ಕಸಾಪ ಸಹ ಕಾರ್ಯದರ್ಶಿ ಖರಡ್ಯ ಬಸವೇಗೌಡ ಮಾತನಾಡಿ, ಜಿಲ್ಲೆಗೆ ಮೂರನೇ ಬಾರಿಗೆ ಸಮ್ಮೇಳನ ಲಭಿಸಿರುವುದು ಹೆಮ್ಮೆಯ ವಿಷಯ. ಸಾಹಿತಿ, ಜಾನಪದ ವಿದ್ವಾಂಸ ಗೋ.ರು.ಚನ್ನಬಸಪ್ಪ ಅವರು ಸಮ್ಮೇಳನಾಧ್ಯಕ್ಷರಾಗಿದ್ದಾರೆ ಎಂದರು.ನಾಡು ನುಡಿ ಹಾಗೂ ಜಿಲ್ಲೆಯ ವಿಶೇಷತೆ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಶಾಲೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮ್ಮೇಳನದಲ್ಲಿ ಕವಿಗಳು, ಸಾಹಿತಿಗಳು ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ, ನೆಲ, ಜಲ, ಕೃಷಿ, ಕಲೆ, ಸಂಗೀತ, ಜಾನಪದ, ರಂಗಭೂಮಿ ಆಚಾರ ವಿಚಾರ ಮುಂತಾದ ಕ್ಷೇತ್ರಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ನೀವು ಪಾಲ್ಗೊಳ್ಳುವಿಕೆ ಅತಿ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಫಿರೋಜ್‌ಪಾಷ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಬಸವರಾಜು, ತೇಜಸ್ವಿನಿ, ಶ್ರೀಧರ್, ಶ್ರೀವಾಣಿ, ನೂರ್ ಸುಲ್ತಾನ, ರಿಯಾನ, ರುದ್ರೇಶ್, ಪವಿತ್ರ ಸೇರಿದಂತೆ ಹಲವರು ಇದ್ದರು.ಕೆಪಿಎಸ್ ಸ್ಕೂಲ್ ನಲ್ಲಿ ಅರ್ಥ ಪೂರ್ಣ ಕನ್ನಡ ರಸಪ್ರಶ್ನೆ ಕಾರ್ಯಕ್ರಮ
ಕೆ.ಆರ್ .ಪೇಟೆ:ಮಂಡ್ಯದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ತಾಲೂಕಿನ ಪ್ರೌಢಶಾಲಾ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ಚಾಲನೆ ನೀಡಿದರು.
ಪಟ್ಟಣದ ಕೆಪಿಎಸ್ ಸ್ಕೂಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಇಒ ತಿಮ್ಮೇಗೌಡ ಶಿಕ್ಷಕರಿಗೆ ಪ್ರಶ್ನೆ ಪತ್ರಿಕೆಗಳನ್ನು ಶಿಕ್ಷಕರಿಗೆ ಹಸ್ತಾಂತರಿಸಿ ಮಾತನಾಡಿ, ಕನ್ನಡ ನಾಡು, ನುಡಿ, ಸಾಹಿತ್ಯ, ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗಿದೆ ಎಂದರು.ಸರಳವಾದ ಪ್ರಶ್ನೆಗೆ ಸರಿಯಾದ ಉತ್ತರ ನೀಡಿ ಹೆಚ್ಚು ಅಂಕ ಗಳಿಸಿದ ಮೂವರು ಹಾಗೂ ಸಮಾಧಾನಕರ ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ನಗದ ಬಹುಮಾನ, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ಯೋಚಿಸಿ, ಆಲೋಚಿಸಿ ಸರಿಯಾದ ಉತ್ತರ ನೀಡಿ ಬಹುಮಾನ ಗೆಲ್ಲಬೇಕು ಎಂದು ಮನವಿ ಮಾಡಿದರು.
ಈ ವೇಳೆ ತಾಲೂಕು ಕಸಾಪ ಅಧ್ಯಕ್ಷ ಪೂರ್ಣ ಚಂದ್ರ ತೇಜಸ್ವಿ, ಕ್ಷೇತ್ರ ಸಮನ್ವಯ ಅಧಿಕಾರಿ ಮಂಜುನಾಥ್, ಕೆಪಿಎಸ್ ಸ್ಕೂಲ್ ಮುಖ್ಯ ಶಿಕ್ಷಕ ರಾಘವೇಂದ್ರ ಮಾತನಾಡಿದರು. ಪರಿಷತ್ ಮಾಜಿ ಕೆ.ಆರ್.ನೀಲಕಂಠ, ಪದಾಧಿಕಾರಿಗಳಾದ ತಿಪ್ಪೇಗೌಡ, ಶ್ಯಾರಹಳ್ಳಿ ಗೋವಿಂದರಾಜು, ಇಸಿಒ ಕೃಷ್ಣನಾಯಕ, ಶಿಕ್ಷಕ ನಂಜಪ್ಪ ಇದ್ದರು.