ಬಸವ ಸಂಸ್ಕೃತಿ ಅಭಿಯಾನ ಉದ್ಘಾಟನೆ ಇಂದು

| Published : Sep 01 2025, 01:04 AM IST

ಸಾರಾಂಶ

ಬಸವನಬಾಗೇವಾಡಿ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ನಾಡಿನಾದ್ಯಂತ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನ ಉದ್ಘಾಟನೆ ಸಮಾರಂಭ ಪಟ್ಟಣದ ಬಸವೇಶ್ವರ ದೇವಾಲಯದ ಸಿಬಿಎಸ್‌ಸಿ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಸೆ.೧ರಂದು ಸಂಜೆ ೬ ಗಂಟೆಗೆ ನಡೆಯಲಿದೆ.

ಬಸವನಬಾಗೇವಾಡಿ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ನಾಡಿನಾದ್ಯಂತ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನ ಉದ್ಘಾಟನೆ ಸಮಾರಂಭ ಪಟ್ಟಣದ ಬಸವೇಶ್ವರ ದೇವಾಲಯದ ಸಿಬಿಎಸ್‌ಸಿ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಸೆ.೧ರಂದು ಸಂಜೆ ೬ ಗಂಟೆಗೆ ನಡೆಯಲಿದೆ.

ನಾಡಿನ ವಿವಿಧ ಮಠಾಧೀಶರು ಸಾನ್ನಿಧ್ಯ ಹಾಗೂ ನೇತೃತ್ವ ವಹಿಸಲಿದ್ದು, ಮಾತು ವಚನವಾಗಬೇಕು ಕುರಿತು ಸಾಹಿತಿ ವಿರಣ್ಣ ರಾಜೂರ, ಶಿವಶರಣೆಯರ ಜೀವನಾದರ್ಶ ಕುರಿತು ಚಿಂತಕಿ ಮೀನಾಕ್ಷಿ ಬಾಳಿ ಉಪನ್ಯಾಸ ನೀಡುವರು. ಸಚಿವರಾದ ಶಿವಾನಂದ ಪಾಟೀಲ, ಎಂ.ಬಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಜಾಗತಿಕ ಲಿಂಗಾಯತ ಮಹಾಸಭೆಯ ಮಹಾಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ, ಶಾಸಕ ಭೀಮನಗೌಡ ಪಾಟೀಲ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸನಗೌಡ ಹರನಾಳ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ವೀರಶೈವ ಲಿಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ವ್ಹಿ.ಸಿ.ನಾಗಠಾಣ, ಜಾಗತಿಕ ಲಿಂಗಾಯತ ಮಹಾಸಭಾದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾದೇವಿ ಗೋಕಾಕ, ತಾಲೂಕು ಜಾಗತಿಕ ಲಿಂಗಾಯತ ಮಹಾಸಭೆ ಅಧ್ಯಕ್ಷ ಎಫ್.ಡಿ.ಮೇಟಿ, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಕಾರ್ಯಾಧ್ಯಕ್ಷ ಸೋಮನಗೌಡ ನಾಡಗೌಡ, ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಹಿರಿಯರಾದ ಬಿ.ಕೆ.ಕಲ್ಲೂರ, ಶಿವನಗೌಡ ಬಿರಾದಾರ ಆಗಮಿಸುವರು. ಕಾರ್ಯಕ್ರಮಕ್ಕೂ ಮುನ್ನ ನಾಡಿನ ಖ್ಯಾತ ಗಾಯಕರಿಂದ ವಚನ ಸಂಗೀತ ನಡೆಯಲಿದೆ. ನಂತರ ರಾತ್ರಿ ೮ ಗಂಟೆಗೆ ಸಾಣೇಹಳ್ಳಿಯ ಶಿವಸಂಚಾರ ಕಲಾತಂಡದಿಂದ ಜಂಗಮದೆಡೆಗೆ ನಾಟಕ ಪ್ರದರ್ಶನಗೊಳ್ಳಲಿದೆ.

ಬೆಳಗ್ಗೆ ೧೦.೩೦ ಗಂಟೆಗೆ ಷಟ್‌ಸ್ಥಲ ಧ್ವಜಾರೋಹಣ ಹಾಗೂ ಪೂಜ್ಯರ ಸ್ವಾಗತ ಬಸವೇಶ್ವರ ದೇವಾಲಯದಲ್ಲಿ ನಡೆಯಲಿದೆ. ನಂತರ ೧೧ ಗಂಟೆಗೆ ಸಿಬಿಎಸ್‌ಇ ಶಾಲಾ ಆವರಣದಲ್ಲಿರುವ ವೇದಿಕೆಯಲ್ಲಿ ವಚನ ಸಂವಾದ, ಮಧ್ಯಾಹ್ನ ೩.೩೦ ಗಂಟೆಗೆ ಬಸವ ಜನ್ಮಸ್ಮಾರಕದ ಮುಂಭಾಗ ಬಸವ ಸಂಸ್ಕೃತಿ ಅಭಿಯಾನ ರಥಯಾತ್ರೆ ಹಾಗೂ ಭವ್ಯಮೆರವಣಿಗೆ ಚಾಲನೆ ನೀಡಲಾಗುವುದು. ಇಡೀ ದಿನ ನಿರಂತರ ಪ್ರಸಾದ ವ್ಯವಸ್ಥೆಯನ್ನು ಶಾಲಾ ಆವರಣದಲ್ಲಿ ಮಾಡಲಾಗಿದೆ ಎಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಎಂ.ಜಿ.ಆದಿಗೊಂಡ ತಿಳಿಸಿದರು.