ಸಾರಾಂಶ
5ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಕುಶಾಲನಗರ ಪಟ್ಟಣದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕುಶಾಲನಗರ ತಾಲೂಕು ಘಟಕದ ವತಿಯಿಂದ 5 ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಕುಶಾಲನಗರ ಪಟ್ಟಣದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.
ಪಟ್ಟಣದ ಬೈಚನಹಳ್ಳಿ ಮಾರಿಯಮ್ಮ ದೇವಾಲಯದ ಬಳಿಯಿಂದ ಆರಂಭಗೊಂಡ ಮೆರವಣಿಗೆಯು ಪಟ್ಟಣದ ಮುಖ್ಯ ರಸ್ತೆ ಹಾಗೂ ರಥಬೀದಿ ಮೂಲಕ ಸಾಗಿ ಗಾಯತ್ರಿ ಕಲ್ಯಾಣ ಮಂದಿರದ ಆವರಣದಲ್ಲಿ ಸಮಾಪನಗೊಂಡಿತು.ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ತಾಲೂಕು ಘಟಕದ ಅಧ್ಯಕ್ಷ ಎಚ್ಎಂ ಮಧುಸೂದನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.
ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.ಬಸವ ಜಯಂತಿ ಅಂಗವಾಗಿ ಮೆರವಣಿಗೆಯಲ್ಲಿ ವೀರಗಾಸೆ ನೃತ್ಯ ಜನರ ಗಮನ ಸೆಳೆಯಿತು. ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ, ಮಹಾಸಭಾದ ಮಾಜಿ ಅಧ್ಯಕ್ಷ ಎಂಎಸ್ ಶಿವಾನಂದ, ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ನಂದೀಶ್, ಮಹಾಸಭಾದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೀಪಿಕಾ ಕರುಣ್, ಮಹಾಸಭಾದ ತಾಲೂಕು ಘಟಕದ ಉಪಾಧ್ಯಕ್ಷ ಎಂ.ವಿ.ಹರೀಶ್, ಪ್ರಧಾನ ಕಾರ್ಯದರ್ಶಿ ಬಿ.ಎನ್.ಶುಭಶೇಖರ್, ಕಾರ್ಯದರ್ಶಿಗಳಾದ ಕೆ.ಡಿ.ಪ್ರಶಾಂತ್, ಎನ್.ಧರ್ಮೇಂದ್ರ, ಸಂಘಟನಾ ಕಾರ್ಯದರ್ಶಿ ಬಿ.ಬಿ.ಲೋಕೇಶ್, ಖಜಾಂಚಿ ವಿ.ಸಿ.ಅಜಿತ್, ಮಹಾಸಭಾದ ಕುಶಾಲನಗರ ತಾಲೂಕು ಯುವ ಘಟಕದ ಅಧ್ಯಕ್ಷ ಎಚ್.ಪಿ.ವಿನಯ್, ಮೆರವಣಿಗೆಯಲ್ಲಿ ನಂದಿಧ್ವಜದ ಕುಣಿತ ಜನರ ಗಮನ ಸೆಳೆಯಿತು.