ಸಂಘಟನೆಗಳ ಒಕ್ಕೂಟದ ಗೌರವ ಅಧ್ಯಕ್ಷರು, ಒಕ್ಕೂಟ ಅಧ್ಯಕ್ಷ ಹಾಗೂ ಸದಸ್ಯರು, ಯಜಮಾನರು, ಮುಖಂಡರು, ಶ್ರೀ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನಗರದಲ್ಲಿ ಜಿಲ್ಲಾ ಡಾ.ಬಾಬು ಜಗಜೀವನ್ ರಾಮ್ ಸಂಘಟನೆಗಳ ಒಕ್ಕೂಟದ ವತಿಯಿಂದ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದ ಶ್ರೀ ವಿಶ್ವಗುರು, ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಿಸಲಾಯಿತು. ಸಂಘಟನೆಗಳ ಒಕ್ಕೂಟದ ಗೌರವ ಅಧ್ಯಕ್ಷರು, ಒಕ್ಕೂಟ ಅಧ್ಯಕ್ಷ ಹಾಗೂ ಸದಸ್ಯರು, ಯಜಮಾನರು, ಮುಖಂಡರು, ಶ್ರೀ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಗೌರವ ಅಧ್ಯಕ್ಷ ಬಸವನಪುರ ರಾಜಶೇಖರ್, ಅಧ್ಯಕ್ಷ ಎಚ್,ಎಚ್, ನಾಗರಾಜು, ಗ್ರಾಪಂ ಮಾಜಿ ಅಧ್ಯಕ್ಷ ಮಹದೇವಯ್ಯ ಅರಕಲವಾಡಿ, ವೀರಶೈವ ಮುಖಂಡ ಬೃಂಗೇಶ್, ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಶಿವಕುಮಾರ್, ಸಹ ಕಾರ್ಯದರ್ಶಿ ಶಿವಕುಮಾರ್, ಸಿದ್ದಪ್ಪಾಜಿ, ಮುಖಂಡರಾದ ರಾಮಯ್ಯ, ಲಿಂಗರಾಜು, ಸುಂದರ್, ರಾಚಪ್ಪ, ರಾಜು, ಮಹದೇವಸ್ವಾಮಿ, ಜಯರಾಜು, ಸ್ವಾಮಿ, ಸೇರಿ ಇತರರು ಹಾಜರಿದ್ದರು.