9 ರಂದು ನಡೆಯುವ ಬಸವ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ

| Published : Jun 06 2024, 12:30 AM IST

ಸಾರಾಂಶ

ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ವೀರಶೈವ ಸಮಾಜದವರ ಮನೆಗಳಿಗೆ ತೆರಳಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳು ಮತ್ತು ಬಸವ ಬಳಗಗಳ ಒಕ್ಕೂಟದ ವತಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜೂ. 9ರ ಭಾನುವಾರ ಅತ್ಯಂತ ವೈಭವ ಮತ್ತು ವಿಶಿಷ್ಟವಾಗಿ ಆಚರಣೆ ಮಾಡಲಾಗುತ್ತದೆ ಎಂದು ರೈತ ಮುಖಂಡ ಸರಗೂರು ನಟರಾಜು ಹೇಳಿದರು.

ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ವೀರಶೈವ ಸಮಾಜದವರ ಮನೆಗಳಿಗೆ ತೆರಳಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ ಮಾತನಾಡಿದ ಅವರು, 27ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮವನ್ನು ವಿವಿಧ ವೀರಶೈವ ಸಂಘಟನೆಗಳು ಮತ್ತು ಸಮಾಜದ ಮುಖಂಡರು ಸೇರಿ ನಡೆಸುತ್ತಿದ್ದು, ಈ ಕಾರ್ಯಕ್ರಮಕ್ಕೆ ವೀರಶೈವ ಸಮಾಜದ ಸರ್ವರೂ ಆಗಮಿಸಬೇಕೆಂದು ಮನವಿ ಮಾಡಿದರು.

ಬಸವ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಗೆ ಆಗಮಿಸುವವರಿಗೂ 200 ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಶರಣರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು. ವೀರಶೈವ ಮುಖಂಡರಾದ ಎಲ್.ಪಿ. ರವಿಕುಮಾರ್, ಪುಟ್ಟರಾಮು, ಮಂಜುನಾಥ್, ಸಿದ್ದೇಶ್ ಇದ್ದರು.