ಮೇ ೨೬ಕ್ಕೆ ಬಸವ ಜಯಂತಿ, ಪ್ರತಿಭಾ ಪುರಸ್ಕಾರ

| Published : May 14 2024, 01:03 AM IST / Updated: May 14 2024, 01:04 AM IST

ಸಾರಾಂಶ

ಸಂಡೂರಿನ ಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿ ಹಾಗೂ ಗದಗದ ಶಿವಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಸಂಡೂರು: ತಾಲೂಕು ವೀರಶೈವ ಲಿಂಗಾಯತ ಸಂಘದಿಂದ ಮೇ ೨೬ರಂದು ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ಶ್ರೀಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಚಿತ್ರಿಕಿ ಸತೀಶ್ ಕುಮಾರ್ ತಿಳಿಸಿದರು.

ಪಟ್ಟಣದ ವೀರಶೈವ ಲಿಂಗಾಯತ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಂಡೂರಿನ ಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿ ಹಾಗೂ ಗದಗದ ಶಿವಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಸ್ಮಯೋರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಬಹಿರ್ಜಿ ಘೋರ್ಪಡೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಮಾಜದ ಮುಖಂಡರಾದ ಕೆ.ಎಸ್. ನಾಗರಾಜ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಸಮಾಜದ ಮುಖಂಡರಾದ ಬಿ.ನಾಗನಗೌಡ್ರು, ೨೦೨೩ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಚೋರುನೂರು ಗ್ರಾಮದ ವಿಜಯಕುಮಾರ್ ಆಗಮಿಸಲಿದ್ದಾರೆ ಎಂದರು.

ಪ್ರತಿಭಾ ಪುರಸ್ಕಾರ:

೨೦೨೩-೨೪ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಶೇ.೮೫ ಮತ್ತು ಅದಕ್ಕಿಂತ ಹೆಚ್ಚು ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.೮೦ ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರ್ಹ ವಿದ್ಯಾರ್ಥಿಗಳು ಮೇ ೨೨ರ ಒಳಗಾಗಿ ತಮ್ಮ ೨ ಪಾಸ್‌ಪೋರ್ಟ್ ಸೈಜಿನ ಭಾವಚಿತ್ರ, ಆಧಾರ್ ಕಾರ್ಡ್ ಮತ್ತು ಅಂಕಪಟ್ಟಿಯ ಝೆರಾಕ್ಸ್ ಪ್ರತಿಗಳನ್ನು ಸಂಘದ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ೮೮೬೭೭೮೮೯೨೬, ೯೪೪೮೦೬೦೨೮೧, ೯೮೮೬೯೩೪೦೯೭, ೯೪೪೮೦೨೫೧೩೨ ಕರೆ ಮಾಡಲು ಸೂಚಿಸಿದರು.

ಸಂಘದ ಕಾರ್ಯದರ್ಶಿ ಜಿ. ವೀರೇಶ್ ಮಾತನಾಡಿ, ಮೇ ೨೬ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಯಶವಂತನಗರದ ಶ್ರೀಸಿದ್ದರಾಮೇಶ್ವರ ಸಂಸ್ಥಾನ ವಿರಕ್ತಮಠದ ಗಂಗಾಧರ ಸ್ವಾಮೀಜಿ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲಾನ್ ಬಾಷ ಹಾಗೂ ಅವರ ತಂಡದಿಂದ ವಚನ ಹಾಗೂ ಜಾನಪದ ನೃತ್ಯ ರೂಪಕವನ್ನು ಹಮ್ಮಿಕೊಳ್ಳಲಾಗಿದೆ. ನಂತರ ಎಸ್.ಎಸ್.ಎಲ್.ಸಿ ಹಾಗೂ ದ್ವಿತಿಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ಮೂವರು ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.

ಸಭೆಯಲ್ಲಿ ಸಂಘದ ಗೌರವ ಅಧ್ಯಕ್ಷ ಮೇಲುಸೀಮೆ ಶಂಕ್ರಪ್ಪ, ಉಪಾಧ್ಯಕ್ಷರಾದ ಪಿ ರವಿಕುಮಾರ್, ನಿರ್ದೇಶಕರಾದ ಭುವನೇಶ್ ಮೇಟಿ, ಸುರೇಶ್‌ಗೌಡ, ಎಸ್.ಟಿ.ಡಿ. ರುದ್ರಗೌಡ, ಕೆ. ಯರಿಸ್ವಾಮಿ ಉಪಸ್ಥಿತರಿದ್ದರು.