ಬಸವ ಜಯಂತಿ: ಇಂದು ಬಸವೇಶ್ವರರ ತೊಟ್ಟಿಲೋತ್ಸವ

| Published : May 10 2024, 01:42 AM IST

ಸಾರಾಂಶ

ಬಸವನಬಾಗೇವಾಡಿ: ಬಸವ ಜಯಂತಿ ಅಂಗವಾಗಿ ಕೂಡಲಸಂಗಮ ಅಭಿವೃದ್ದಿ ಮಂಡಳಿಯು ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬಸವೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿಯವರು ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸುವ ಮೂಲಕ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಸವ ಜನ್ಮಸ್ಮಾರಕದಲ್ಲಿ ೧೦.೩೦ಕ್ಕೆ ಬಸವೇಶ್ವರರ ತೊಟ್ಟಿಲು ಹಾಗೂ ನಾಮಕರಣ ಮುರುಘೇಂದ್ರ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ.

ಬಸವನಬಾಗೇವಾಡಿ:

ಬಸವ ಜಯಂತಿ ಅಂಗವಾಗಿ ಕೂಡಲಸಂಗಮ ಅಭಿವೃದ್ದಿ ಮಂಡಳಿಯು ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬಸವೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿಯವರು ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸುವ ಮೂಲಕ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಸವ ಜನ್ಮಸ್ಮಾರಕದಲ್ಲಿ ೧೦.೩೦ಕ್ಕೆ ಬಸವೇಶ್ವರರ ತೊಟ್ಟಿಲು ಹಾಗೂ ನಾಮಕರಣ ಮುರುಘೇಂದ್ರ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ.

ಸಂಜೆ ೫ ಗಂಟೆಗೆ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವ ಚಿಂತನ ಸಮಾವೇಶ ಹಾಗೂ ವಚನ ಸಂಗೀತೋತ್ಸವ ಹಮ್ಮಿಕೊಂಡಿದೆ. ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಅತಿಥಿ ಉಪನ್ಯಾಸಕರಾಗಿ ಚಿಕ್ಕನಾಯಕನಹಳ್ಳಿಯ ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ವಿರೇಶ ವಾಲಿ, ಸಾಕ್ಷಿ ಹಿರೇಮಠ ಅವರಿಂದ ವಚನ ಸಂಗೀತ ನಡೆಯಲಿದೆ. ಬೆಂಗಳೂರಿನ ನವ್ಯ ನಾಟ್ಯಸಂಗಮ ತಂಡದಿಂದ ಭಕ್ತಿ ಭಂಡಾರಿ ಬಸವಣ್ಣನವರ ನೃತ್ಯ ರೂಪಕ ಜರುಗಲಿದೆ. ನಂತರ ೯.೩೦ಕ್ಕೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರರ ಅಲಂಕೃತ ಪಲ್ಲಕ್ಕಿ ಉತ್ಸವ ಹಾಗೂ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಸಕಲ ವಾದ್ಯ ಮಂಗಲ ವೈಭವದೊಂದಿಗೆ ಜರುಗಲಿದೆ ಎಂದು ಕೂಡಲಸಂಗಮ ಅಭಿವೃದ್ದಿ ಮಂಡಳಿ ಆಯುಕ್ತ ನಿಂಗಪ್ಪ ಬಿರಾದಾರ ಹೇಳಿದರು.