ಸಾರಾಂಶ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ
ಪ್ರಾಚೀನ ಕಾಲದಿಂದಲೂ ಭಾರತೀಯ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಧಾರ್ಮಿಕ ತಾರತಮ್ಯತೆಯ ಬದುಕು ನಿರಂತರವಾಗಿ ಸಾಗಿ ಬಂದಿದೆ. ೧೨ ನೇ ಶತಮಾನದಲ್ಲಿ ಇದಕ್ಕೊಂದು ನ್ಯಾಯ ಒದಗಿಸಿಕೊಡುವ ಪ್ರಯತ್ನವನ್ನು ಬಸವಾದಿ ಶರಣರು ಮಾಡಿದರು ಎಂದು ಉಪನ್ಯಾಸಕ ಸುರೇಶ ಗಬ್ಬೂರ ಹೇಳಿದರು.ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಮಹಾವಿದ್ಯಾಲಯದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಲಿಂ.ನಾಗಪ್ಪ ಗುರಪ್ಪ ಮರ್ತುರ, ಲಿಂ.ಭಾಗೀರಥಿಬಾಯಿ ಮೇಟಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಅವರು, ಸಮಾಜದಲ್ಲಿನ ಅನಿಷ್ಟ ಪದ್ದತಿಗಳನ್ನು ಕಣ್ಣಾರೆ ಕಂಡಿದ್ದ ಸಾಮಾಜಿಕ ಸಮಾನತೆಯ ಹರಿಕಾರ ಭಕ್ತಿ ಭಂಡಾರಿ ಬಸವಣ್ಣನವರು ಅದನ್ನು ನಿರ್ಮೂಲನೆ ಮಾಡವುದಕ್ಕಾಗಿ ಬಸವ ಕಲ್ಯಾಣದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸಿದರು ಎಂದರು.ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಾತನಾಡಿ, ನಿತ್ಯ ಬದುಕಿನಲ್ಲಿ ವಚನಗಳನ್ನು ಅಳವಡಿಸಿಕೊಂಡು ಮುನ್ನಡೆದರೆ ಸಮಾಜದಲ್ಲಿ ನಾವು ಅತ್ಯಂತ ಗೌರವಯುತ ಜೀವನ ಸಾಗಿಸಲು ಸಾಧ್ಯ ಎಂದು ಹೇಳಿದರು.ತಾಲೂಕು ಶಸಾಪ ಅಧ್ಯಕ್ಷ ವೀರಣ್ಣ ಮರ್ತುರ ಮಾತನಾಡಿ, ವಚನ ಅಧ್ಯಯನ ಮಾಡುವ ಜೊತೆಗೆ ಅದರಲ್ಲಿರುವ ಸಾರವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.ಕದಳಿ ವೇದಿಕೆಯ ಅಧ್ಯಕ್ಷ ಸಾವಿತ್ರಿ ಕಲ್ಯಾಣಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಎ.ಪವಾರ, ಲಿಂಗಾಯತ ಮಹಾಸಭಾದ ತಾಲೂಕಾಧ್ಯಕ್ಷ ಎಪ್.ಡಿ.ಮೇಟಿ, ನಿವೃತ್ತ ಪ್ರಾಧ್ಯಾಪಕ ಪಿ.ಎಲ್.ಹಿರೇಮಠ, ನಿವೃತ್ತ ಉಪಪ್ರಾಚಾರ್ಯ ಎಸ್.ಎಸ್.ಝಳಕಿ, ನಿವೃತ್ತ ಉಪನ್ಯಾಸಕ ಎಚ್.ಎಸ್.ಬಿರಾದಾರ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ಡಾ.ವೀಣಾ ಗುಳೇದಗುಡ್ಡ, ನಿವೃತ್ತ ಶಿಕ್ಷಕರಾದ ಎಸ್.ಜಿ.ಮೊಕಾಶಿ, ಆರ್.ಜಿ.ಅಳ್ಳಗಿ, ವಿರೇಶ ಕುಂಟೋಜಿ ಇತರರು ಇದ್ದರು.