ವಿಶ್ವಮಾನವತೆಯ ಸಂದೇಶ ಸಾರಿದ ಬಸವಕಲ್ಯಾಣವು ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ, ದಾಸೋಹ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಇಡೀ ಜಗತ್ತಿಗೆ ಪರಿಚಯಿಸುವ ಮೂಲಕ ವಿಶ್ವಕ್ಕೆ ಬೆಳಕು ನೀಡಿದ ಐತಿಹಾಸಿಕ ಪುಣ್ಯಭೂಮಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬಸವಕಲ್ಯಾಣ
ವಿಶ್ವಮಾನವತೆಯ ಸಂದೇಶ ಸಾರಿದ ಬಸವಕಲ್ಯಾಣವು ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ, ದಾಸೋಹ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಇಡೀ ಜಗತ್ತಿಗೆ ಪರಿಚಯಿಸುವ ಮೂಲಕ ವಿಶ್ವಕ್ಕೆ ಬೆಳಕು ನೀಡಿದ ಐತಿಹಾಸಿಕ ಪುಣ್ಯಭೂಮಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.ಬಸವಕಲ್ಯಾಣ ನಗರದ ಅನುಭವ ಮಂಟಪದ ಅವರಣದಲ್ಲಿ ಜರುಗಿದ 47ನೇ ವಚನ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಸವಣ್ಣನವರು ಹಾಗೂ 12ನೇ ಶತಮಾನದ ಶರಣರು ಈ ನೆಲದಲ್ಲಿ ಸಂಚರಿಸಿ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ್ದಾರೆ. ಈ ಮಣ್ಣಿನ ಕಣಕಣದಲ್ಲಿಯೂ ಬಸವಶಕ್ತಿ ಅಡಗಿದೆ. ಬಸವಕಲ್ಯಾಣದ ನೆಲಕ್ಕೆ ಕಾಲಿಟ್ಟ ತಕ್ಷಣ ಇಲ್ಲಿನ ಮಣ್ಣನ್ನು ಕಣ್ಣಿಗೆ, ಹಣೆಗೆ ಹಚ್ಚಿಕೊಂಡು ಗೌರವ ಸಲ್ಲಿಸುವಂತಹ ಪವಿತ್ರ ಭಾವನೆ ಮೂಡುತ್ತದೆ ಎಂದರು.ಬಸವಣ್ಣನವರ ತತ್ವಗಳನ್ನು ಆಳವಾಗಿ ಅರಿತುಕೊಂಡು ಅವುಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಕೆಲಸ ನಡೆಯಬೇಕಿದೆ. ಪ್ರತಿಯೊ ಬ್ಬರಲ್ಲಿಯೂ ಸಮಾಜಮುಖಿಯಾಗಿ ಸೇವೆ ಸಲ್ಲಿಸುವ ಉತ್ಸಾಹ ಮೂಡಬೇಕು. ಶರಣರ ಚಿಂತನೆಗಳು ಕೇವಲ ಧಾರ್ಮಿಕ ಕ್ಷೇತ್ರಕ್ಕೆ ಸೀಮಿತವಾಗದೆ ಸಮಾಜದ ಪರಿವರ್ತನೆಗೆ ಪ್ರೇರಣೆಯಾಗಬೇಕು ಎಂದು ತಿಳಿಸಿದರು.ಬಸವಣ್ಣನವರ ತತ್ವಗಳನ್ನು ಆಳವಾಗಿ ಅರಿತುಕೊಂಡು ಅವುಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಕೆಲಸ ನಡೆಯಬೇಕಿದೆ. ಪ್ರತಿಯೊಬ್ಬರಲ್ಲಿಯೂ ಸಮಾಜಮುಖಿಯಾಗಿ ಸೇವೆ ಸಲ್ಲಿಸುವ ಉತ್ಸಾಹ ಮೂಡಬೇಕು. ಶರಣರ ಚಿಂತನೆಗಳು ಕೇವಲ ಧಾರ್ಮಿಕ ಕ್ಷೇತ್ರಕ್ಕೆ ಸೀಮಿತವಾಗದೆ ಸಮಾಜದ ಪರಿವರ್ತನೆಗೆ ಪ್ರೇರಣೆಯಾಗಬೇಕು ಎಂದು ತಿಳಿಸಿದರು.ಬಸವಣ್ಣನವರು ಹಾಗೂ ಶರಣರ ತತ್ವಾದರ್ಶಗಳಿಂದ ಪ್ರೇರಣೆ ಪಡೆದ ರೈತ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಸವ ಉತ್ಸವಗಳಿಗೆ ಆಧ್ಯತೆ ನೀಡುವ ಮೂಲಕ ರಾಜ್ಯಕ್ಕೆ ಹೊಸ ದಿಕ್ಕು ನೀಡುವ ಕೆಲಸ ಮಾಡಿದ್ದರು. ಸಮಸಮಾಜ ನಿರ್ಮಾಣದ ಶ್ರೇಷ್ಠ ಸಂದೇಶ ಸಾರಿದ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚಾಲನೆ ನೀಡಿ 200ಕೋಟಿ ರು. ಅನುದಾನ ಒದಗಿಸಿದ್ದನ್ನು ಸ್ಮರಿಸಿದರು.ಬಸವಣ್ಣನವರು ಪ್ರತಿಪಾದಿಸಿದ ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ಹಾಗೂ ದಾಸೋಹದ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿವೆ. ಶರಣರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದರೊಂದಿಗೆ ಅವುಗಳನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳುವ ಕಾರ್ಯವಾಗಬೇಕಿದೆ. ಜಾತಿ, ವರ್ಗ ಹಾಗೂ ವರ್ಣಭೇದಗಳನ್ನು ಮೀರಿ ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.ಸಾನ್ನಿಧ್ಯ ವಹಿಸಿದ ಅನುಭವ ಮಂಟಪದ ಅಧ್ಯಕ್ಷರಾದ ನಾಡೋಜ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಣ್ಣನವರು ಪ್ರತಿಪಾದಿಸಿದ ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ಹಾಗೂ ದಾಸೋಹದ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿವೆ. ಶರಣರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿ ಸುವುದರೊಂದಿಗೆ ಅವುಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಕಾರ್ಯವಾಗಬೇಕಿದೆ. ಜಾತಿ, ವರ್ಗ ಹಾಗೂ ವರ್ಣಭೇದಗಳನ್ನು ಮೀರಿ ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.