ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂದು ಜನಜಾಗೃತಿ ವೇದಿಕೆ ಸದಸ್ಯರಾದ ಎಂ.ಎನ್. ಚಂದ್ರಮೋಹನ್ ತಿಳಿಸಿದ್ದಾರೆ.

ಕುಶಾಲನಗರ: ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂದು ಜನಜಾಗೃತಿ ವೇದಿಕೆ ಸದಸ್ಯರಾದ ಎಂ.ಎನ್. ಚಂದ್ರಮೋಹನ್ ತಿಳಿಸಿದ್ದಾರೆ. ಕುಶಾಲನಗರದ ಸಮೀಪ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುವರ್ಣ ಮಾತನಾಡಿ, ಮಕ್ಕಳು ಶಿಕ್ಷಣದ ಜೊತೆಗೆ ಸಮಾಜದ ಆಗುಹೋಗುಗಳ ಬಗ್ಗೆ ತಿಳುವಳಿಕೆ ಹೊಂದಬೇಕು ಎಂದರು.ಶಾಲೆ ಶಿಕ್ಷಕ ಮಹೇಂದ್ರ ಅವರು ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಬಗ್ಗೆ ಪ್ರಮಾಣ ವಚನ ಬೋಧಿಸಿದರು. ಯೋಜನೆಯ ಗುಡ್ಡೆ ಹೊಸೂರು ವಲಯ ಮೇಲ್ವಿಚಾರಕರಾದ ಪವಿತ್ರಾಕ್ಷಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಿಕ್ಷಕರಾದ ವಿಜಯಲಕ್ಷ್ಮಿ, ಗಿರೀಶ್ ಇದ್ದರು. ಸೇವಾ ಪ್ರತಿನಿಧಿ ರೋಹಿಣಿ ಸ್ವಾಗತಿಸಿದರು. ಶಿಕ್ಷಕ ಮಹೇಂದ್ರ ವಂದಿಸಿದರು.