ಸಾರಾಂಶ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಬಿಜೆಪಿಯುವ ಮುಖಂಡ ಚನ್ನಮಲ್ಲೀಪುರ ಬಸವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಟ್ಟಣದ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಕಚೇರಿಯಲ್ಲಿ ಅಧ್ಯಕ್ಷ ಎಚ್.ಎಂ.ಮಹೇಶ್ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಚನ್ನಮಲ್ಲೀಪುರ ಬಸವಣ್ಣ ನಾಮಪತ್ರ ಸಲ್ಲಿಸಿದರು. ಅಧ್ಯಕ್ಷ ಸ್ಥಾನಕ್ಕೆ ಇತರೆ ನಿರ್ದೇಶಕರಾರು ನಾಮಪತ್ರ ಸಲ್ಲಿಸಿದ ಹಿನ್ನಲೆ ಚನ್ನಮಲ್ಲೀಪುರ ಬಸವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷರಾಗಿ ಚನ್ನಮಲ್ಲೀಪುರ ಬಸವಣ್ಣ ಆಯ್ಕೆಯಾಗುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಪ್ರಾಥಮಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷ ಮಳವಳ್ಳಿ ಮಹೇಶ್, ಬ್ಯಾಂಕ್‌ನ ಹಿರಿಯ ನಿರ್ದೇಶಕ, ಮಾಜಿ ಅಧ್ಯಕ್ಷರಾದ ಕೊಡಸೋಗೆ ಶಿವಬಸಪ್ಪ, ಎನ್.ಮಲ್ಲೇಶ್, ಎಚ್.ಎಂ.ಮಹೇಶ್, ಶ್ಯಾನಡ್ರಹಳ್ಳಿ ಮಲ್ಲಿಕಾರ್ಜುನ ಸೇರಿದಂತೆ ಬ್ಯಾಂಕಿನ ಎಲ್ಲಾ ನಿರ್ದೇಶಕರು ಹಾಜರಿದ್ದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಮಂಡಲ ಅಧ್ಯಕ್ಷ ಡಿ.ಪಿ.ಜಗದೀಶ್, ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷ ಕೆ.ಆರ್.ಲೋಕೇಶ್, ಪುರಸಭೆ ಮಾಜಿ ಅಧ್ಯಕ್ಷ ಎಲ್.ಸುರೇಶ್, ತಾಪಂ ಮಾಜಿ ಸದಸ್ಯ ಸಿ.ಮಹದೇವಪ್ರಸಾದ್, ಬಿಜೆಪಿ ಹಿರಿಯ ಮುಖಂಡ ನಿಟ್ರೆ ನಾಗರಾಜಪ್ಪ, ಬಿಜೆಪಿ ಯುವ ಮುಖಂಡ ಹಂಗಳ ನಂದೀಶ್, ಛತ್ರಿ ಮಂಜು ಸೇರಿದಂತೆ ನೂರಾರು ಇತರರು ಇದ್ದರು.