ಸಾರಾಂಶ
ಕನ್ನಡಪ್ರಭ ವಾರ್ತೆ ಮೂಡಲಗಿಮಹಾ ಮಾನವತಾವಾದಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಜಗತ್ತಿಗೆ ಪರಿಚಯಿಸಿದ್ದರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು
ಕನ್ನಡಪ್ರಭ ವಾರ್ತೆ ಮೂಡಲಗಿಮಹಾ ಮಾನವತಾವಾದಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಜಗತ್ತಿಗೆ ಪರಿಚಯಿಸಿದ್ದರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು
ಕಲ್ಲೋಳಿ ಪಟ್ಟಣದ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ ವಿಶ್ವಗುರು ಬಸವೇಶ್ವರ ಜಯಂತಿ ಅಂಗವಾಗಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಬಸವಣ್ಣನವರು ಮೂಢನಂಬಿಕೆ ಹೋಗಲಾಡಿಸಿ ಸಮಾಜ ಸುಧಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜಾತಿ, ಉಪಜಾತಿಗಳ ಒಡಕಿನ ನಡುವೆಯೂ ಸಹಪಂಕ್ತಿ ಭೋಜನ, ಸಮಾನತೆ ಕಲ್ಪನೆಗೆ ಆದ್ಯತೆ ಕೊಟ್ಟಿದ್ದರು ಎಂದು ತಿಳಿಸಿದರು.ಬಸವಣ್ಣನವರು ಸಾಮಾಜಿಕ ಮತ್ತು ಧಾರ್ಮಿಕ ರಂಗದಲ್ಲಿ ತಮ್ಮದೇ ಆದ ಮಹತ್ವದ ಕೊಡುಗೆಗಳನ್ನು ನೀಡಿದರು. ಇಷ್ಟಲಿಂಗದ ಮಹತ್ವವನ್ನು ಜಗತ್ತಿಗೆ ಸಾಧರಪಡಿಸಿ ಕಾಯಕವೇ ಕೈಲಾಸ ಎಂದು ಸಾರಿ ಲಿಂಗಾಯತ ಧರ್ಮವನ್ನು ಸ್ಥಾಪಿಸಿ ಸಮಾಜದಲ್ಲಿ ಸಮಾನತೆ ಸೃಷ್ಟಿಸುವುದಕ್ಕಾಗಿ ಶ್ರಮಿಸಿದ್ದರು. ಅವರ ಮೌಲ್ಯಗಳು ನಮಗೆ ಸದಾ ಆದರ್ಶಪ್ರಾಯ ಎಂದರು.
ಈ ಸಂದರ್ಭದಲ್ಲಿ ಸಹಕಾರಿ ನಿರ್ದೇಶಕರಾದ ಪರಪ್ಪ ಮಳವಾಡ, ಶಿವಪ್ಪ ಗೋಸಬಾಳ, ಸಿದ್ದಣ್ಣ ಹೆಬ್ಬಾಳ, ಹಿರಿಯ ಶಾಖಾ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ಪರಪ್ಪ ಗಿರೆಣ್ಣವರ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.