ಸಾರಾಂಶ
ಮಂಳೂರು ತುಳುಭವನದಲ್ಲಿ ಬುಧವಾರ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮ ನೆರವೇರಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಎಲ್ಲರೂ ಸಮಾನರಾಗಿ ಬಾಳಿ ಬದುಕಿ, ಸಂಘರ್ಷರಹಿತ ಮತ್ತು ದ್ವೇಷರಹಿತ ಸಮಾಜ ನಿರ್ಮಾಣಕ್ಕೆ ಬಸವೇಶ್ವರರ ಸಂದೇಶ ಇಂದಿನ ಅಗತ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ಆನಂದ್ ಹೇಳಿದ್ದಾರೆ.ನಗರದ ತುಳುಭವನದಲ್ಲಿ ಬುಧವಾರ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ನಡೆದ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಸವಣ್ಣನವರ ತತ್ವಗಳು ಸದಾ ನಮ್ಮೊಂದಿಗೆ ಇರಬೇಕು. ಸಾಮಾಜಿಕ ಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಪ್ರತಿಪಾದಿಸಿದ್ದ ಅವರು, ಮನುಷ್ಯರಲ್ಲಿ ಮೇಲು- ಕೀಳು ಎಂಬ ನಿಲುವನ್ನು ಕಟುವಾಗಿ ವಿರೋಧಿಸಿದ್ದರು. ಇದುವೇ ಉತ್ತಮ ಸಮಾಜಕ್ಕೆ ಬುನಾದಿಯಾಯಿತು ಎಂದು ಅವರು ಹೇಳಿದರು.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು ಉಪನ್ಯಾಸ ನೀಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಎಸ್. ಗುರುಮೂರ್ತಿ ಇದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ರೇಣುಕಾ ಕಣಿಯೂರು ನಿರೂಪಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))