ಸಾರಾಂಶ
ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬಸವ ಜಯಂತಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸಿ ಮಾತನಾಡಿ, ಕಾಯಕ ಮಾಡುವ ಎಲ್ಲಾ ಸಮುದಾಯದವರನ್ನು ಒಗ್ಗೂಡಿಸಿದವರು ಬಸವಣ್ಣನವರು ಎಂದರು. ಬಸವಣ್ಣನ ಬಹುತೇಕ ಆಶಯಗಳು ಸಂವಿಧಾನದಲ್ಲಿ ಕಾನೂನು ರೂಪದಲ್ಲಿ ಅಡಕವಾಗಿರುವುದನ್ನು ಕಾಣುತ್ತೇವೆ. ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ನಡೆದಾಗ ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಣಲು ಸಾಧ್ಯ ಎಂದರು. ಕ್ಷೇತ್ರದಲ್ಲಿನ ಬಸವ ಭವನಗಳ ನಿರ್ಮಾಣ, ಅಪೂರ್ಣವಾಗಿರುವ ಭವನದ ಪೂರ್ಣಗೊಳಿಸಲು 3 ಕೋಟಿಗೂ ಹೆಚ್ಚು ಅನುದಾನವನ್ನು ಕೊಟ್ಟಿದ್ದೇನೆ. ಕ್ಯಾಬಿನೆಟ್ ಸಭೆಯಲ್ಲಿ ಗುಂಡಾಲ ಹಾಗೂ ಸುವರ್ಣಾವತಿ ಜಲಾಶಯಗಳ ಅಭಿವೃದ್ಧಿಗೆ 120 ಕೋಟಿ ಅನುದಾನ ದೊರೆತಿದೆ ಎಂದರು.
ಬಸವ ಭವನ ಸೇರಿದಂತೆ ಇತರೆ ಸಮುದಾಯಗಳ ಸಮುದಾಯ ಭವನಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ 25 ಕೋಟಿ ವಿಶೇಷ ಅನುದಾನವನ್ನು ನೀಡಿದ್ದಾರೆ ಎಂದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸಂಸ್ಕೃತ ಶಿಕ್ಷಕ ಕುಮಾರ್ ಅವರು ಬಸವಣ್ಣನ ಕುರಿತು ಸುದೀರ್ಘವಾಗಿ ಮಾತನಾಡಿದರು. ಗುಂಡೇಗಾಲ ಪಟ್ಟದ ಮಠ ಶ್ರೀಮಲ್ಲಿಕಾರ್ಜುನ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಬಸವರಾಜು, ತಾಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ನಗರಸಭೆ ಅಧ್ಯಕ್ಷ ರೇಖಾ, ಉಪಾಧ್ಯಕ್ಷ ಎ.ಪಿ.ಶಂಕರ್, ಜಾಗತಿಕ ಲಿಂಗಾಯದ ಮಹಾಸಭಾ ಅಧ್ಯಕ್ಷ ಬಿಂದು ಲೋಕೇಶ್ ತಾಲ್ಲೂಕು ಅ.ಭಾ.ವೀ.ಲಿಂ ಮಹಾಸಭೆ ಉಪಾಧ್ಯಕ್ಷ ರಾಜು ಹಾಗೂ ವಿವಿದ ಇಲಾಖೆಗಳ ಅಧಿಕಾರಿಗಳು ಇದ್ದರು.