ಸಾರಾಂಶ
ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಭಾವಚಿತ್ರವನ್ನು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅನಾವರಣಗೊಳಿಸಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದ್ದು ಹೆಮ್ಮೆಯ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅಭಿಪ್ರಾಯಪಟ್ಟರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಭಾವಚಿತ್ರವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.
ಪ್ರಪಂಚಕ್ಕೆ ಸಮಾನತೆ ಸಂದೇಶ ಸಾರುವ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊಟ್ಟ ಮೊದಲು ಬಾರಿ ಜಾಗತಿಕ ಸಮುದಾಯಕ್ಕೆ ಧಾರೆಯೆರೆದು ಕೊಟ್ಟವರು ಬಸವಣ್ಣನವರು. ಅನುಭವ ಮಂಟಪದ ಮೂಲಕ ಇಡೀ ಮನುಕುಲದ ಉದ್ಧಾರಕ್ಕಾಗಿ, ಸರ್ವರ ಕಲ್ಯಾಣಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ತಂದ ಕೀರ್ತಿ ಮತ್ತು ಶ್ರೇಯಸ್ಸು ಬಸವಣ್ಣನವರಿಗೆ ಸಲ್ಲುತ್ತದೆ ಎಂದು ನುಡಿದರು.ಈ ಸಂದರ್ಭದಲ್ಲಿ ಚುನಾವಣೆ ತಹಸೀಲ್ದಾರ್ ಸಂತೋಷಿ ರಾಣಿ, ಕಚೇರಿಯ ಸಹಾಯಕ ಅಮರೇಶ ಬಿರಾದಾರ, ಸಹಾಯಕ ನಿರ್ದೇಶಕ ವಿಜಯೇಂದ್ರ ಹುಲಿನಾಯಕ ಸೇರಿದಂತೆ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.