ವಿಶ್ವಗುರು ಬಸವಣ್ಣನವರು ಸಮಸಮಾಜ ನಿರ್ಮಾಣ ಮಾಡಿ, ಎಲ್ಲರನ್ನು ತಮ್ಮ ಹೃದಯದಲ್ಲಿ ಇಂಬಿಟ್ಟಿ ಕೊಂಡಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಬಸವಲಿಂಗ ಪಟ್ಟದ್ದೇವರು ನುಡಿದರು.
ಕನ್ನಡಪ್ರಭ ವಾರ್ತೆ ಭಾಲ್ಕಿ
ವಿಶ್ವಗುರು ಬಸವಣ್ಣನವರು ಸಮಸಮಾಜ ನಿರ್ಮಾಣ ಮಾಡಿ, ಎಲ್ಲರನ್ನು ತಮ್ಮ ಹೃದಯದಲ್ಲಿ ಇಂಬಿಟ್ಟಿ ಕೊಂಡಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಬಸವಲಿಂಗ ಪಟ್ಟದ್ದೇವರು ನುಡಿದರು.ನಗರದ ಚನ್ನಬಸವಾಶ್ರಮ ಪರಿಸರದಲ್ಲಿ ಅಮರಾವತಿ ಶಿವಯ್ಯ ಹಿರೇಮಠ ಪ್ರತಿಷ್ಠಾನದಿಂದ ಸೋಮವಾರ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ಬಸವಣ್ಣನವರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಕ್ಷರಶಃ ಪಾಲಿಸುತ್ತ ಬಂದಿರುವವರು ಡಾ.ಕೆ.ಎಸ್.ಬಂಧು ಅವರು. ನಡೆ-ನುಡಿ ಒಂದಾಗಿಸಿಕೊಂಡು ತಮ್ಮ ಜೀವನ ನಡೆಸುತ್ತಿದ್ದಾರೆ ಎಂದರು.
ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಮ್ಮುಖ ವಹಿಸಿ ಮಾತನಾಡಿದರು. ಬೀದರ್ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಸ್.ಬಿರಾದಾರ್ ಅವರು ಡಾ.ಕೆ.ಎಸ್.ಬಂಧು ಅವರಿಗೆ ಪೂಜ್ಯ ಬಸವಲಿಂಗ ಪಟ್ಟದ್ದೇವರ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿದರು.ಪ್ರಶಸ್ತಿ ಸ್ವೀಕರಿಸಿದ ಡಾ.ಕೆ.ಎಸ್.ಬಂಧು ಮಾತನಾಡಿದರು. ಎಂ.ಬಂಡೆಪ್ಪ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಿಗ್ಗಾವಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಟಿ.ಎಂ.ಭಾಸ್ಕರ್, ಪ್ರಮುಖರಾದ ಜೈರಾಜ ಖಂಡ್ರೆ, ಬಸವರಾಜ ನಂದಿ, ಡಾ.ಗವಿಸಿದ್ಧಪ್ಪ ಪಾಟೀಲ ಆಗಮಿಸಿದರು. ಸ್ವರೂಪಾ ಬಂಡೆಪ್ಪ ಬಳತೆ ಬಸವ ಗುರುವಿನ ಪೂಜೆ ನೆರವೇರಿಸಿದರು. ಪ್ರತಿಷ್ಠಾನದ ಅಧ್ಯಕ್ಷೆ ಡಾ.ಎಂ.ಮಕ್ತುಂಬಿ ಪ್ರಾಸ್ತಾವಿಕ ಮಾತನಾಡಿದರು. ದೀಪಕ ಠಮಕೆ ನಿರೂಪಿಸಿದರು.