ತಂದೆ ಹಾದಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ಬೊಮ್ಮಾಯಿ

| Published : Jun 05 2024, 01:31 AM IST / Updated: Jun 05 2024, 10:13 AM IST

ಸಾರಾಂಶ

ಭದ್ರಕೋಟೆ ಉಳಿಸಿಕೊಂಡ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಂದೆಯ ಹಾದಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ 43,513 ಮತಗಳ ಅಂತರದಿಂದ ಕಾಂಗ್ರೆಸ್‌ ವಿರುದ್ಧ ಜಯಭೇರಿ ಬಾರಿಸುವ ಮೂಲಕ ರಾಷ್ಟ್ರರಾಜಕಾರಣಕ್ಕೆ ಇದೇ ಮೊದಲ ಬಾರಿ ಪ್ರವೇಶಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ತಂದೆ ದಿವಂಗತ ಎಸ್‌.ಆರ್‌.ಬೊಮ್ಮಾಯಿ ಅವರು ಕೂಡ ಮುಖ್ಯಮಂತ್ರಿಯಾದ ಬಳಿಕ ರಾಷ್ಟ್ರ ರಾಜಕಾರಣಕ್ಕೆ ಹೋಗಿದ್ದರು. ಕೇಂದ್ರ ಸಚಿವರೂ ಆಗಿದ್ದರು. ಇದೀಗ ಪುತ್ರ ಬಸವರಾಜ ಕೂಡ ತಂದೆಯ ಹಾದಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ಅಡಿ ಇಟ್ಟಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ 43,513 ಮತಗಳ ಅಂತರದಿಂದ ಕಾಂಗ್ರೆಸ್‌ ವಿರುದ್ಧ ಜಯಭೇರಿ ಬಾರಿಸುವ ಮೂಲಕ ರಾಷ್ಟ್ರರಾಜಕಾರಣಕ್ಕೆ ಇದೇ ಮೊದಲ ಬಾರಿ ಪ್ರವೇಶಿದ್ದಾರೆ. ಸತತ ನಾಲ್ಕನೇ ಬಾರಿಗೆ ಕ್ಷೇತ್ರದಲ್ಲಿ ಕಮಲ ಅರಳಿದ್ದು, ತೀವ್ರ ಪೈಪೋಟಿ ನಡುವೆಯೂ ಮತ್ತೊಮ್ಮೆ ಗೆಲುವಿನ ಪತಾಕೆ ಹಾರಿಸಿದ್ದಾರೆ.

ತೀವ್ರ ಹಣಾಹಣಿಯಿಂದ ಕೂಡಿದ್ದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 7,02,189 ಮತ ಪಡೆದಿದ್ದರೆ, ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಆನಂದಸ್ವಾಮಿ ಗಡ್ಡದೇವರಮಠ 6,60,191 ಮತ ಪಡೆದಿದ್ದಾರೆ.

ಸತತ ಐದನೇ ಗೆಲುವು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಎದುರಿಸಿ ಅದರಲ್ಲಿ ಯಶಸ್ವಿಯಾಗಿದ್ದಾರೆ. 4 ಬಾರಿ ಶಿಗ್ಗಾಂವಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಬೊಮ್ಮಾಯಿ ಲೋಕಸಭೆ ಚುನಾವಣೆಯಲ್ಲೂ ಗೆಲ್ಲುವ ಮೂಲಕ ಸತತ 5ನೇ ಗೆಲುವು ದಾಖಲಿಸಿದರು.

ಬಸವರಾಜ ಬೊಮ್ಮಾಯಿ ಅವರ ತಂದೆ ದಿವಂಗತ ಎಸ್‌.ಆರ್‌.ಬೊಮ್ಮಾಯಿ ಅವರು ಕೂಡ ಮುಖ್ಯಮಂತ್ರಿಯಾದ ಬಳಿಕ ರಾಷ್ಟ್ರ ರಾಜಕಾರಣಕ್ಕೆ ಹೋಗಿದ್ದರು. ಕೇಂದ್ರ ಸಚಿವರೂ ಆಗಿದ್ದರು. ಇದೀಗ ಪುತ್ರ ಬಸವರಾಜ ಬೊಮ್ಮಾಯಿ ಕೂಡ ತಂದೆಯ ಹಾದಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ಅಡಿ ಇಟ್ಟಿದ್ದಾರೆ.

ಹಾವೇರಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ಹಾಗೂ ಸಚಿವ ಎಚ್‌.ಕೆ.ಪಾಟೀಲ ಪ್ರತಿನಿಧಿಸುತ್ತಿರುವ ಗದುಗಿನಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿದೆ.