ಬಸವರಾಜ ಹೊರಟ್ಟಿಗೆ ಕಲ್ಕೂರ ಪ್ರತಿಷ್ಠಾನ ಕಾರಂತ ಪ್ರಶಸ್ತಿ- 2025

| Published : Oct 07 2025, 01:03 AM IST

ಬಸವರಾಜ ಹೊರಟ್ಟಿಗೆ ಕಲ್ಕೂರ ಪ್ರತಿಷ್ಠಾನ ಕಾರಂತ ಪ್ರಶಸ್ತಿ- 2025
Share this Article
  • FB
  • TW
  • Linkdin
  • Email

ಸಾರಾಂಶ

ಕಲ್ಕೂರ ಪ್ರತಿಷ್ಠಾನದಿಂದ ನೀಡಲಾಗುವ ‘ಕಾರಂತ ಪ್ರಶಸ್ತಿ -2025’ಗೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಚಿಂತಕ, ಹಿರಿಯ ಮುತ್ಸದ್ದಿ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ

ಮಂಗಳೂರು: ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಕಲ್ಕೂರ ಪ್ರತಿಷ್ಠಾನದಿಂದ ನೀಡಲಾಗುವ ‘ಕಾರಂತ ಪ್ರಶಸ್ತಿ -2025’ಗೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಚಿಂತಕ, ಹಿರಿಯ ಮುತ್ಸದ್ದಿ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ತಿಳಿಸಿದ್ದಾರೆ.

ಹೊರಟ್ಟಿ ಅವರು ಪಶ್ಚಿಮ ಶಿಕ್ಷಕ ಮತಕ್ಷೇತ್ರದಿಂದ ಸತತ 8 ಬಾರಿ ಸ್ಪರ್ಧಿಸಿ ಗೆದ್ದು ರಾಷ್ಟ್ರದ ಇತಿಹಾಸದಲ್ಲೇ ದಾಖಲೆ ನಿರ್ಮಿಸಿದ್ದಾರೆ. 2004 ರಲ್ಲಿ ಸಚಿವರಾಗಿ ಆಯ್ಕೆಯಾಗಿರುವ ಹೊರಟ್ಟಿಯವರು ವಿಜ್ಞಾನ ತಂತ್ರಜ್ಞಾನ, ಸಣ್ಣ ಉಳಿತಾಯ ಹಾಗೂ ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಖಾತೆಯನ್ನು ನಿಭಾಯಿಸಿದರು, 2006 ರಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಕಾನೂನು ಮತ್ತು ಸಂಸದೀಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಇದಲ್ಲದೆ 1995-96ರ ವಿಷಯ ಸಮಿತಿ ಹಾಗೂ 1996- 1999 ತನಕ ಮತ್ತು 2015 ರಿಂದ ಭರವಸೆ ಸಮಿತಿ ಅಧ್ಯಕ್ಷರಾಗಿ ಹಾಗೂ ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿಯೂ ಆಯ್ಕೆಯಾಗಿದ್ದಾರೆ.ನಾಲ್ಕು ದಶಕಗಳಿಂದ ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ಅಪ್ರತಿಮ ಸಾಧನೆಗೈದಿರುವ ಏಕೈಕ ಕನ್ನಡಿಗ ಹಾಗೂ ಒಂದೇ ಕ್ಷೇತ್ರದಿಂದ ಸತತ 8 ಬಾರಿ ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ವಿಶ್ವ ದಾಖಲೆ ನಿರ್ಮಿಸಿ 43 ವರ್ಷಗಳಿಂದ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಹಿತ ಕಾಯುವಲ್ಲಿ ಶ್ರಮಿಸುತ್ತಿರುವ ಇವರ ಸಾಧನೆ ‘ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ ದಾಖಲೆ ಸೇರಿದೆ ಎಂದು ಪ್ರಕಟಣೆ ತಿಳಿಸಿದೆ.