ಅಗಸನಪುರ ಗ್ರಾಪಂನ ಹಿಂದಿನ ಅಧ್ಯಕ್ಷ ಎಸ್.‌ಅರ್.‌ಗವಿಸಿದ್ದಯ್ಯ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದು ಬಸವರಾಜಮ್ಮ ಹೊರತು ಪಡಿಸಿ ಬೇರೆಯವರು ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ಹರೀಶ್ ಕುಮಾರ್ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಹಲಗೂರು

ಸಮೀಪದ ಅಗಸನಪುರ ಗ್ರಾಪಂ ನೂತನ ಅಧ್ಯಕ್ಷರಾಗಿ ಸಾಹಳ್ಳಿ ಬಸವರಾಜಮ್ಮ ಅವಿರೋಧವಾಗಿ ಆಯ್ಕೆಯಾದರು.ಹಿಂದಿನ ಅಧ್ಯಕ್ಷ ಎಸ್.‌ಅರ್.‌ಗವಿಸಿದ್ದಯ್ಯ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದು ಬಸವರಾಜಮ್ಮ ಹೊರತು ಪಡಿಸಿ ಬೇರೆಯವರು ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ಹರೀಶ್ ಕುಮಾರ್ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ನೂತನ ಅದ್ಯಕ್ಷೆ ಬಸವರಾಜಮ್ಮ ಮಾತನಾಡಿ, ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವೆ. ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ದೊರಕುವ ಸೌಲಭ್ಯಗಳನ್ನು ಅರ್ಹ ಫಲಾನಿಭವಿಗಳಿಗೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಗ್ರಾಪಂ ಉಪಾಧ್ಯಕ್ಷೆ ಪುಟ್ಟಸಿದ್ದಮ್ಮ ಸದಸ್ಯರಾದ‌ ಕೃಷ್ಣ, ಅರ್.ಎಸ್.‌ಗವಿಸಿದ್ದಯ್ಯ, ಸ್ವಾಮಿಗೌಡ, ಆನಂದ, ನೇತ್ರಾವತಿ, ನಾಗಮ್ಮ, ಯಶೋಧಮ್ಮ, ಉಮಾ, ಪ್ರಕಾಶ್, ರವಿ, ಸಿ.ಉಮೇಶ್‌, ಟಿ.ಎ.ಪಿ.ಸಿ.ಎಂ.ಎಸ್ ಮಾಜಿ ಅಧ್ಯಕ್ಷ ಕೆ.ಎಸ್.‌ದ್ಯಾಪೇಗೌಡ, ಮುಖಂಡರಾದ ಸ್ವಾಮಿ ಗೌಡ, ಅನಿಲ್, ಪ್ರಸಾದ್, ಜೋಗಪ್ಪ, ನಾಗಮಹದೇವ, ಶಶಿರಾಜು, ಸುಬ್ಬೇಗೌಡ, ಶ್ರೀನಿವಾಸ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಲೋಕಾಯುಕ್ತ ಅಧಿಕಾರಿಗಳಿಂದ ನಾಳೆ ದೂರು, ಅಹವಾಲು ಸ್ವೀಕಾರ

ಮಳವಳ್ಳಿ: ಮಂಡ್ಯ ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಮಾ.12ರಂದು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು ಮತ್ತು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರವರೆಗೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಡಿವೈಎಸ್‌ಪಿ ಎಚ್.ಟಿ.ಸುನಿಲ್ ಕುಮಾರ್, ಆರ್.ಎಂ.ಮೋಹನ್ ರೆಡ್ಡಿ, ಎಂ.ಜಯರತ್ನ, ಕರ್ನಾಟಕ ಲೋಕಾಯುಕ್ತ, ಪೋಲಿಸ್ ಇನ್ಸ್ಇ ಪೆಕ್ಟರ್ ಬಿ.ಪಿ. ಬ್ಯಾಟರಾಯಗೌಡ ಪಾಲ್ಗೊಂಡು ಅಹವಾಲು ಸ್ವೀಕರಿಸುವರು.

ಸರ್ಕಾರಿ ಹಾಗೂ ಅರೆಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ನೌಕರರುಗಳು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಭ ಮಾಡಿದ ಬಗ್ಗೆ ತಾಲೂಕಿನ ಸಾರ್ವಜನಿಕರು ಖುದ್ದಾಗಿ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ, ಪೋಲಿಸ್ ಅಧೀಕ್ಷಕರು ತಿಳಿಸಿದ್ದಾರೆ.