ಸಾರಾಂಶ
ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿಯ ಕಣ್ಣೂರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವಿ.ಬಸವರಾಜು, ಉಪಾಧ್ಯಕ್ಷರಾಗಿ ಪಾರ್ವತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆ ವೇಳೆ ಅಧ್ಯಕ್ಷ ಸ್ಥಾನಕ್ಕೆ ವಿ.ಬಸವರಾಜು, ಉಪಾಧ್ಯಕ್ಷ ಸ್ಥಾನಕ್ಕೆ ಪಾರ್ವತಮ್ಮ ಅವರನ್ನು ಹೊರತುಪಡಿಸಿ ಯಾವೊಬ್ಬ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ತಿಬ್ಬಯ್ಯ ಅವಿರೋಧ ಆಯ್ಕೆ ಘೋಷಣೆ ಮಾಡಿದರು.ಗ್ರಾಪಂ ಸದಸ್ಯ ಕೆ.ಎಂ.ಮುನಿಯಪ್ಪ ಮಾತನಾಡಿ, ಹೊಸಕೋಟೆ ನಗರಕ್ಕೆ ಕೂಗಳತೆ ದೂರದಲ್ಲಿರುವ ಕಣ್ಣೂರಹಳ್ಳಿ ಗ್ರಾಮದಲ್ಲಿ ತೀವ್ರ ಹೋರಾಟ ಮಾಡಿ ಹಲವಾರು ಹಿರಿಯರು ಡೇರಿ ಸ್ಥಾಪನೆಗೆ ಕಾರಣೀಭೂತರಾಗಿದ್ದಾರೆ. ಶಾಸಕ ಶರತ್ ಬಚ್ಚೇಗೌಡ, ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೋಡಿಹಳ್ಳಿ ಸುರೇಶ್, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೃಷ್ಣಮೂರ್ತಿ, ಯುವ ಮುಖಂಡ ನಾಣಿ ನೇತೃತ್ವದಲ್ಲಿ ಚುನಾವಣೆಗೆ ಆಸ್ಪದ ನೀಡದೆ ಅವಿರೋಧ ಆಯ್ಕೆಗೆ ಸದಸ್ಯರ ಮನವೊಲಿಕೆ ಮಾಡಿದ್ದರು. ಆದ್ದರಿಂದ ಮುಂದಿನ ದಿನಗಳಲ್ಲಿ ಡೇರಿಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಮುಂದಾಗಿ ಎಂದು ಸಲಹೆ ನೀಡಿದರು. ಡೇರಿ ನೂತನ ಅಧ್ಯಕ್ಷ ಬಸವರಾಜು ಮಾತನಾಡಿ, ನಮ್ಮ ಡೇರಿಯು ಪ್ರತಿದಿನ 2 ಸಾವಿರ ಲೀಟರ್ ಹಾಲು ಉತ್ಪಾದನೆ ಮಾಡುವ ದೊಡ್ಡ ಡೇರಿಯಾಗಿದೆ. ಮುಂದಿನ ದಿನಗಳಲ್ಲಿ ಹೈನೋದ್ಯಮಕ್ಕೆ ಪ್ರೋತ್ಸಾಹ ನೀಡುವ ಹತ್ತಾರು ಕಾರ್ಯಕ್ರಮ ರೂಪಿಸಿ ಡೇರಿಯ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದರು.
ಮುಖಂಡರಾದ ಮುನಿಶಾಮಣ್ಣ, ಕೆ.ಬಿ.ಕೃಷ್ಣಪ್ಪ, ರಾಮಕೃಷ್ಣಪ್ಪ, ಬಚ್ಚಣ್ಣ, ಜಿ.ದೇವರಾಜು, ರಮೇಶ್, ಟಿ.ತಮ್ಮಣ್ಣ, ವೆಂಕಟೇಶ್, ರವಿ, ಗುರುಸ್ವಾಮಿ, ಸಂಪಣ್ಣ ನಿರ್ದೇಶಕರಾದ ಕೆ.ಮಂಜುನಾಥ್, ಶ್ರೀನಿವಾಸ್, ಮುನಿಯಪ್ಪ, ನಟರಾಜು, ಮಾಳಿಗಪ್ಪ, ನರಸಿಂಹರಾಜು, ಲಕ್ಷ್ಮಮ್ಮ, ನಾಗಣ್ಣ ಹಾಜರಿದ್ದರು.