ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿರುವ ವಿರಕ್ತ ಮಠದಲ್ಲಿ ಜ.16ರಿಂದ 18ರವರೆಗೆ ಬಸವ ತತ್ವದ ಮಹಾ ಬೆಳಗಿನಲ್ಲಿ ಬೆಳಗಿದ ಲಿಂಗೈಕ್ಯ ಶ್ರೀ ಸಂಗಮನಾಥ ಮಹಾಸ್ವಾಮಿಗಳ 64ನೇ ವರ್ಷದ ಸ್ಮರಣೋತ್ಸವ ಮತ್ತು ಲಿಂಗೈಕ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳ 19ನೇ ವರ್ಷದ ಸ್ಮರಣೋತ್ಸವ ಹಾಗೂ ಬಸವ ತತ್ವ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕಾಂಗ್ರೆಸ್ ಮುಖಂಡ ಹೊದಿಗೆರೆ ರಮೇಶ್ ಹೇಳಿದ್ದಾರೆ.

- 17ರಂದು ರೈತ ಸಂಗಮ, ಮಹಿಳಾ ಸಂಗಮ, ಶರಣ ಸಂಗಮ

- - -

ಚನ್ನಗಿರಿ: ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿರುವ ವಿರಕ್ತ ಮಠದಲ್ಲಿ ಜ.16ರಿಂದ 18ರವರೆಗೆ ಬಸವ ತತ್ವದ ಮಹಾ ಬೆಳಗಿನಲ್ಲಿ ಬೆಳಗಿದ ಲಿಂಗೈಕ್ಯ ಶ್ರೀ ಸಂಗಮನಾಥ ಮಹಾಸ್ವಾಮಿಗಳ 64ನೇ ವರ್ಷದ ಸ್ಮರಣೋತ್ಸವ ಮತ್ತು ಲಿಂಗೈಕ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳ 19ನೇ ವರ್ಷದ ಸ್ಮರಣೋತ್ಸವ ಹಾಗೂ ಬಸವ ತತ್ವ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕಾಂಗ್ರೆಸ್ ಮುಖಂಡ ಹೊದಿಗೆರೆ ರಮೇಶ್ ಹೇಳಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮ ನಿಮಿತ್ತ 17ರಂದು ರೈತ ಸಂಗಮ, ಮಹಿಳಾ ಸಂಗಮ, ಶರಣ ಸಂಗಮ, ಸಾಮೂಹಿಕ ಇಷ್ಟಲಿಂಗ ಪೂಜಾ ಪ್ರಾತ್ಯಕ್ಷತೆ, ಸಾಮೂಹಿಕ ಪ್ರಾರ್ಥನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜ.18ರಂದು ಬಸವ ತತ್ವ ಸಮ್ಮೇಳನ ಹಾಗೂ ವಿಶ್ವಗುರು ಬಸವ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಗಳಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಸಚಿವ ಹಿಂದುಳಿದ ವರ್ಗಗಳ ನಾಯಕ ಸತೀಶ್ ಜಾರಕಿಹೊಳಿ ನೆರವೇರಿಸಲಿದ್ದಾರೆ ಎಂದ ಅವರು, ವಿಶ್ವಗುರು ಬಸವ ಶ್ರೀ ಪ್ರಶಸ್ತಿಯನ್ನು ಶಿಕ್ಷಣ ತಜ್ಞ, ಸಾಮಾಜಿಕ ಕಾರ್ಯಕರ್ತ ನಾಡೋಜ ಡಾ.ವುಡೇ ಪಿ. ಕೃಷ್ಣ ಅವರಿಗೆ ಪ್ರಧಾನ ಮಾಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೀವವೈವಿದ್ಯ ನಿಗಮ ಅಧ್ಯಕ್ಷ ವಡ್ನಾಳ್ ಜಗದೀಶ್, ತಾಲೂಕು ಕಾಂಗ್ರೆಸ್ ಮುಖಂಡರಾದ ಸಿ.ನಾಗರಾಜ್, ಕೊಂಡದಹಳ್ಳಿ ಜಯಣ್ಣ, ಉಮೇಶ್ ಹಾಜರಿದ್ದರು.

- - -

-15ಕೆಸಿಎನ್‌ಜಿ1: ತಾಲೂಕು ಕಾಂಗ್ರೆಸ್ ಮುಖಂಡ ಹೊದಿಗೆರೆ ರಮೇಶ್ ಪತ್ರಿಕಾಗೋಷ್ಠಿ ನಡೆಸಿ ಬಸವತತ್ವ ಸಮ್ಮೇಳನ ಮಾಹಿತಿ ನೀಡಿದರು.