ಸಾರಾಂಶ
ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಶ್ರೀ ಕನ್ನಂಬಾಡಿ ಅಮ್ಮನವರ ವಾರ್ಷಿಕೋತ್ಸವ ಅದ್ಧೂರಿಯಾಗಿ ನಡೆಯಿತು.
ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಶ್ರೀ ಕನ್ನಂಬಾಡಿ ಅಮ್ಮ ನವರ ವಾರ್ಷಿಕೋತ್ಸವ ಅದ್ಧೂರಿಯಾಗಿ ನಡೆಯಿತು.
ಏ. 21 ಮತ್ತು 22ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು. 21ರಂದು ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು. 22ರಂದು ಕಾವೇರಿ ನದಿಯಲ್ಲಿ ಗಂಗಾಸ್ನಾನ, ಗಂಗಾಪೂಜೆ ನೆರವೇರಿಸಿ ದೇವರ ಪಲ್ಲಕ್ಕಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿ ಕೆಂಡಕೊಂಡ ಪೂಜೆ ನೆರವೇರಿಸಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಈ ಸಂದರ್ಭ ವೀರಗಾಸೆ ಕುಣಿತ ಎಲ್ಲರ ಗಮನ ಸೆಳೆಯಿತು.ಎರಡು ದಿನಗಳ ಪೂಜಾ ಕಾರ್ಯದಲ್ಲಿ ಸ್ವತಂತ್ರ ಬಸವಲಿಂಗ ಸ್ವಾಮಿಗಳು ಮತ್ತು ಶ್ರೀ ಶಾಂತಮಲ್ಲಿಕಾರ್ಜುನ ಮಹಾ ಸ್ವಾಮಿಗಳು ಇವರ ಸಾನ್ನಿಧ್ಯದಲ್ಲಿ ನಡೆಯಿತು. ಈ ಪೂಜಾ ಕಾರ್ಯದಲ್ಲಿ ಸಮಿತಿ ಅಧ್ಯಕ್ಷರಾದ ಎಚ್. ಎಸ್. ಪೂರ್ಣಿಮ ಶಿವಕುಮಾರ್ ಮತ್ತು ಎಲ್ಲ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.