ಬಸವೇಶ್ವರರ ಆದರ್ಶ ನಮ್ಮೆಲ್ಲರಿಗೆ ದಾರಿದೀಪ

| Published : May 01 2025, 12:45 AM IST

ಸಾರಾಂಶ

ಬಸವಣ್ಣನವರ ಬೋಧನೆಗಳು ಸಮಾನ ಮತ್ತು ನ್ಯಾಯಯುತ ಸಮಾಜದತ್ತ ನಮಗೆ ಸ್ಫೂರ್ತಿ ಮತ್ತು ಮಾರ್ಗದರ್ಶನ ನೀಡುತ್ತಲೇ ಇರುತ್ತವೆ

ಬಳ್ಳಾರಿ: ನಗರ ಹೊರ ವಲಯದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಜಗಜ್ಯೋತಿ ಬಸವೇಶ್ವರವರ 892ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಜರುಗಿತು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ವಿವಿ ಕುಲಪತಿ ಪ್ರೊ. ಎಂ.ಮುನಿರಾಜು, ವಿಶ್ವಗುರು ಬಸವಣ್ಣನವರ ಮೌಲ್ಯ ಮತ್ತು ತತ್ವಾದರ್ಶಗಳು ನಮ್ಮೆಲ್ಲರಿಗೆ ದಾರಿದೀಪವಾಗಿದೆ. ಬಸವಣ್ಣನವರ ಬೋಧನೆಗಳು ಸಮಾನ ಮತ್ತು ನ್ಯಾಯಯುತ ಸಮಾಜದತ್ತ ನಮಗೆ ಸ್ಫೂರ್ತಿ ಮತ್ತು ಮಾರ್ಗದರ್ಶನ ನೀಡುತ್ತಲೇ ಇರುತ್ತವೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ವಾಣಿಜ್ಯ ನಿಕಾಯದ ಡೀನ ಡಾ.ಸದ್ಯೋಜಾತಪ್ಪ ಮಾತನಾಡಿ, ಮನುಷ್ಯನು ತನ್ನನು ತಾನು ಅರಿತವನೇ ದೇವರು. ಮನುಷ್ಯನು ಎಂದಿಗೂ ತನ್ನ ಮೌಲ್ಯ ಕಳೆದುಕೊಳ್ಳಬಾರದು ಎಂದರು.

ಬಸವಣ್ಣನವರ ವ್ಯಕ್ತಿತ್ವ ಅಳವಡಿಸಿಕೊಂಡರೆ ಮಾತ್ರ ಉತ್ತಮ ಬದುಕನ್ನು ಕಟ್ಟಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಜೀವ ವಿಜ್ಞಾನ ನಿಕಾಯದ ಡೀನ ಪ್ರೊ.ಶಶಿಕಾಂತ ಮಜಗಿ, ಸಮಾಜ ವಿಜ್ಞಾನ ನಿಕಾಯದ ಡೀನ ಪ್ರೊ.ಗೌರಿ ಮಾಣಿಕ್ ಮಾನಸ ವೇದಿಕೆಯಲ್ಲಿ ಇದ್ದರು.

ಡಾ.ಕೆ.ಸಿ ಪ್ರಶಾಂತ ಸ್ವಾಗತಿಸಿದರು. ಡಾ. ಶಶಿಧರ ಕೆಲ್ಲೂರ್ ನಿರೂಪಿಸಿ ವಂದಿಸಿದರು.

ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.