ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿದ ನಂತರ ಮೊದಲ ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದ್ದು, ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿದ ನಂತರ ಮೊದಲ ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದ್ದು, ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾನುವಾರ ಬೆಳಿಗ್ಗೆ 7 ರಿಂದ ಸಂಜೆ 5 ರವರಿಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ ಗೆ ಚುನಾವಣೆ ನಡೆಯಿತು. ಕರ್ನಾಟಕ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಅವರು ಅಧಿಕಾರಿಗಳ ತಂಡದ ಜೊತೆ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಶಾಂತಿಯುತವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು. ಪಟ್ಟಣ ಪಂಚಾಯತ್ ಚುನಾವಣೆಗೆ ಅಧಿಕಾರಿಗಳು ಕೈಗೊಂಡಿರುವ ಪೂರ್ವ ಸಿದ್ಧತೆ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎ .ಬಿ. ಬಸವರಾಜ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಶ್ರೀಮತಿ ದುರ್ಗಾಶ್ರೀ, ಚುನಾವಣಾ ವೀಕ್ಷಕರಾದ ಜಿಲ್ಲಾಪಂಚಾಯಿತಿ ಉಪ ಕಾರ್ಯದರ್ಶಿ ಶ್ರೀ ಶಿವಕುಮಾರ್, ತಹಶೀಲ್ದಾರ್ ಡಾ. ಮಲ್ಲಪ್ಪ. ಕೆ. ಯರಗೋಳ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಫೋಟೋ-

21ಕೆಡಿಬಿಪಿ5- ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಪಂ ಚುನಾವಣೆ ಮತಗಟ್ಟೆಗಳಿಗೆ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

--

21ಕೆಡಿಬಿಪಿ6- ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಪಂ ಚುನಾವಣೆ ಮತಗಟ್ಟೆಗಳಿಗೆ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಭೇಟಿ ನೀಡಿದ ವೇಳೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸ್ವಾಗತಿಸಿದರು.