ಉಡುಪಿ: ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್‌ನಿಂದ ಮಾನ್ಯತೆ ಪಡೆದ ನೂತನ ಉಡುಪಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್‌ನ್ನು ಸೋಮವಾರ ಇಲ್ಲಿನ ಮಾಧವ ಕೃಪಾ ಶಾಲೆಯ ಮೈದಾನದಲ್ಲಿ ಮಾಹೆ ವಿವಿಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಉದ್ಘಾಟಿಸಿ, ಲಾಂಛನ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಅವರು ಇಂದು ಕ್ರಿಕೆಟ್‌ಗೆ ಮಾತ್ರ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಅದು ಸರಿಯಲ್ಲ. ಬಾಸ್ಕೆಟ್ ಬಾಲ್ ಗೂ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ. ಮಾಹೆಯ ಮರೀನಾ ಮತ್ತು ಎಂಐಟಿಯ ಸುಸಜ್ಜಿತ ಬಾಸ್ಕೆಟ್ ಬಾಲ್ ಕ್ರೀಡಾಂಗಣ ಇದೆ. ಮುಂದಿನ ದಿನಗಳಲ್ಲಿ ಈ ಕ್ರೀಡೆಗೆ ಮಾಹೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಅಂತಾರಾಷ್ಟ್ರೀಯ ಬಾಸ್ಕೆಟ್ ಬಾಲ್ ಆಟಗಗಾರ ಜುಗನ್ ಎಸ್ ದ್ಯಾನೇಶ್ವರನ್, ಮಾಹೆ ನನಗೆ ಒಳ್ಳೆಯ ಸಹಕಾರ ನೀಡಿದೆ. ಮಣಿಪಾಲ ಇದು ನನ್ನ ಎರಡನೇ ಮನೆ ಇದ್ದಂತೆ. ಟೂರ್ನಮೆಂಟ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಭಾಗವಹಿಸಿರುವುದು ನೋಡಿ ಖುಷಿ ಆಯಿತು. ಈ ಭಾಗದಿಂದ 10 - 15 ಪ್ರತಿಭಾವಂತ ಮಕ್ಕಳು ದೇಶದ ಬಾಸ್ಕೆಟ್ ಬಾಲ್ ತಂಡವನ್ನು ಪ್ರತಿನಿಧಿಸಬೇಕು ಎಂದರು.ಅಸೋಸಿಯೇಷನ್ ನೂತನ ಜಿಲ್ಲಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್, ಉಡುಪಿಯಲ್ಲಿ 6 ತಿಂಗಳಲ್ಲಿ ಸಿಂಥೆಟಿಕ್ ಬಾಸ್ಕೆಟ್ ಬಾಲ್ ಸ್ಟೇಡಿಯಂ ನಿರ್ಮಿಸಿ, ರಾಜ್ಯಮಟ್ಟದ ಟೂರ್ನಮೆಂಟ್ ಹಮ್ಮಿಕೊಳ್ಳುವ ಯೋಜನೆ ಹಾಕಿಕೊಂಡಿದ್ದೇವೆ ಎಂದರುಸಭಾ ಕಾರ್ಯಕ್ರಮ ಬಳಿಕ ಮಣಿಪಾಲದ ಮಾಧವ ಕೃಪಾ ಶಾಲೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟಗಳಿಗೆ ಚಾಲನೆ ನೀಡಲಾಯಿತು. ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಮಾಧವ ಕೃಪಾ ಕೃಪಾ ಶಾಲೆಯ ಪ್ರಾಂಶುಪಾಲೆ ಸ್ವಾತಿ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.ಕ್ರಿಕೆಟಿನಂತೆ ಬಾಸ್ಕೆಟ್ ಬಾಲ್ನ್ನೂ ಪ್ರೋತ್ಸಾಹಿಸಿ: ಡಾ. ಎಚ್.ಎಸ್. ಬಲ್ಲಾಳ್
ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್‌ನಿಂದ ಮಾನ್ಯತೆ ಪಡೆದ ನೂತನ ಉಡುಪಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್‌ನ್ನು ಸೋಮವಾರ ಇಲ್ಲಿನ ಮಾಧವ ಕೃಪಾ ಶಾಲೆಯ ಮೈದಾನದಲ್ಲಿ ಮಾಹೆ ವಿವಿಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಉದ್ಘಾಟಿಸಿ, ಲಾಂಛನ ಬಿಡುಗಡೆಗೊಳಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.