ಸಾರಾಂಶ
ಸ್ವಚ್ಛತೆಯಿಂದ ಆರೋಗ್ಯವನ್ನು ಕಾಪಾಡಲು ಸಾಧ್ಯವಾಗುತ್ತದೆ
ಕನ್ನಡಪ್ರಭ ವಾರ್ತೆ ಮೈಸೂರು
ಕುವೆಂಪುನಗರದಲ್ಲಿರುವ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಶುಕ್ರವಾರ ಸ್ವಚ್ಛತಾ ಐ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಸುತ್ತಮುತ್ತಲಿನ ಅವರಣವನ್ನು ಸ್ವಚ್ಛಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಈ ವೇಳೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ. ಮಹದೇವಸ್ವಾಮಿ ಮಾತನಾಡಿ, ಸ್ವಚ್ಛತೆಯಿಂದ ಆರೋಗ್ಯವನ್ನು ಕಾಪಾಡಲು ಸಾಧ್ಯವಾಗುತ್ತದೆ. ಕೇಂದ್ರ ಸರ್ಕಾರವು ಮೈ ಭಾರತ ಅಡಿಯಲ್ಲಿ ಸ್ವಚ್ಛ ಐ ಸೇವಾ ಕಾರ್ಯಕ್ರಮವನ್ನು ದೇಶದ ಎಲ್ಲಾ ಕಡೆಗಳಲ್ಲಿ ನಡೆಸುವಂತೆ ಮಾರ್ಗದರ್ಶನ ನೀಡಿರುವುದರಿಂದ ನಮ್ಮ ಕಾಲೇಜಿನಲ್ಲಿ ಸುಮಾರು 15 ದಿನಗಳಿಂದ ವಿವಿಧ ಕಡೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಇದರಿಂದ ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಲ್ಲಿ ವಾಸ ಮಾಡುವ ಪ್ರದೇಶಗಳನ್ನು ಸ್ವಚ್ಛಯಿಂದ ಇಟ್ಟುಕೊಳ್ಳುವಂತೆ ತಿಳಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಟಿ. ರಮೇಶ, ವಿ. ಅಶ್ವಿನಿ, ಮೈತ್ರಿ ಪ್ರಭಾಕರ, ಚೇತನ್, ಎನ್. ಮಣಿ ಹಾಗೂ ವಿದ್ಯಾರ್ಥಿಗಳು ಇದ್ದರು.