ಬಾಯರ್ ಸ್ಫೋಟ: ಕಾರ್ಮಿಕ ಮಹಿಳೆ ಸಾವು

| Published : May 22 2024, 12:52 AM IST

ಸಾರಾಂಶ

ಉಪ್ಪಿನಕಾಯಿ ತಯಾರಿಕಾ ಘಟಕದಲ್ಲಿ ಬಾಟ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ನಿಖಿಲ್ ಪಾಟೀಲ ಒಡೆತನದ ಪ್ರಿಯಾ ಎಕ್ಸ್‌ಪೋರ್ಟ್‌ನಲ್ಲಿ ಮಂಗಳವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಅಥಣಿಉಪ್ಪಿನಕಾಯಿ ತಯಾರಿಕಾ ಘಟಕದಲ್ಲಿ ಬಾಟ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ನಿಖಿಲ್ ಪಾಟೀಲ ಒಡೆತನದ ಪ್ರಿಯಾ ಎಕ್ಸ್‌ಪೋರ್ಟ್‌ನಲ್ಲಿ ಮಂಗಳವಾರ ನಡೆದಿದೆ. ಸತ್ತಿ ಗ್ರಾಮದ ಸುನಂದಾ ಸಿದ್ದಪ್ಪ ತೇಲಿ ಸಾವನ್ನಪ್ಪಿದ ಕಾರ್ಮಿಕ ಮಹಿಳೆ. ಈ ಸಂಬಂಧ ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಟ್ಲರ್ ಬ್ಲಾಸ್ಟ್ ಆಗಿದ್ದು, ಇದರ ತೀವ್ರತೆಗೆ ಕಾರ್ಖಾನೆಯ ಗೋಡೆ ಒಡೆದಿದೆ. ಕೆಲಸ ಮಾಡುತ್ತಿದ್ದ ಮೂವರು ಮಹಿಳೆಯರ ಪೈಕಿ ಸುನಂದಾ ಸಿದ್ದಪ್ಪ ತೇಲಿ ಸಾವನ್ನಪ್ಪಿದ್ದರೇ ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಥಣಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.