ಸಾರಾಂಶ
ದಾಬಸ್‍ಪೇಟೆ: ಬಿಬಿಎಂಪಿ ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ಕೇವಲ ರಾಜಕೀಯವಾಗಿ ಗುರುತಿಸಿಕೊಳ್ಳದೆ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡು ಗ್ರಾಮೀಣ ಮಕ್ಳಳಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಶಿಕ್ಷಣ ನೀಡಲು ಮುಂದಾಗಿದ್ದರು ಎಂದು ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಅಕಾಡೆಮಿ ಅಧ್ಯಕ್ಷ ಉಮಾಶಂಕರ್ ತಿಳಿಸಿದರು.

ಪಟ್ಟಣದ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ಸಂಸ್ಥಾಪಕರ ದಿನದ ಅಂಗವಾಗಿ ಬಿಬಿಎಂಪಿ ಮಾಜಿ ಉಪಮೇಯರ್ ರಮೀಳಾ ಉಮಾಶಂಕರ್ ಪುಣ್ಯಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ,ದಿ.ರಮೀಳಾ ಉಮಾಶಂಕರ್ ನಮ್ಮ ಶಾಲೆಯ ಸಂಸ್ಥಾಪಕರಾಗಿದ್ದು ಅವರ ಆಸೆಯಂತೆ ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕೆಂಬ ದೃಷ್ಟಿಯಿಂದ ದಾಬಸ್‍ಪೇಟೆಯಲ್ಲಿ ಶಾಲೆಯನ್ನು ಪ್ರಾರಂಭಿಸಲಾಯಿತು ಎಂದು ಹೇಳಿದರು.
ಸಿಇಒ ವರುಣ್ ಕುಮಾರ್ ಮಾತನಾಡಿ, ದಿ.ರಮೀಳಾ ಉಮಾಶಂಕರ್ ಉತ್ತಮ ಸೇವೆ ಮತ್ತು ಚಾಣಾಕ್ಷತೆಯಿಂದಾಗಿ ಬಿಬಿಎಂಪಿ ಉಪಮೇಯರ್ ಆಗಿದ್ದರು. ಇವರಿಂದ ಬೆಂಗಳೂರಿನ ಜನತೆ ಉತ್ತಮ ಆಡಳಿತ ನೀಡುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಅಧಿಕಾರ ವಹಿಸಿಕೊಂಡ ಒಂದೇ ದಿನಕ್ಕೆ ಹೃದಯಾಘಾತರದಿಂದ ನಮ್ಮನ್ನೆಲ್ಲ ಬಿಟ್ಟು ಅಗಲಿದ್ದು ಅವರ ಅಸೆಯಂತೆ ಕುಟುಂಬಸ್ಥರು ಶಾಲೆ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದರು.ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ರಾಮಚಂದ್ರ, ಗ್ರಾಪಂ ಉಪಾಧ್ಯಕ್ಷ ಬೈರೇಶ್, ಮಾಜಿ ಸದಸ್ಯ ದೇವರಾಜು, ಶಾಲಾ ಪ್ರಾಂಶುಪಾಲ ದಿಲೀಪ್ ಕುಮಾರ್ ಇತರರು ಉಪಸ್ಥಿತರಿದ್ದರು.
ಪೋಟೋ 6 : ದಾಬಸ್‍ಪೇಟೆಯ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ಸಂಸ್ಥಾಪಕರ ದಿನದ ಅಂಗವಾಗಿ ಬಿಬಿಎಂಪಿ ಮಾಜಿ ಉಪಮೇಯರ್ ರಮೀಳಾ ಪುಣ್ಯಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಆಡಳಿತ ಮಂಡಳಿ ಪುಷ್ಪನಮನ ಸಲ್ಲಿಸಿದರು.