ಸಾರಾಂಶ
ಬೆಂಗಳೂರು : ಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಲ್ಲಿ ಸ್ಕೈಡೆಕ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳ ಅನುಷ್ಠಾನಕ್ಕೆ ಸಂಬಂದಿಸಿದಂತೆ ಗುರುವಾರ ಮಲ್ಲೇಶ್ವರದ ಪಾಲಿಕೆಯ ಐಪಿಪಿ ಕಚೇರಿಯಲ್ಲಿ ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಗ್ರೇಟರ್ ಬೆಂಗಳೂರು ವಿಚಾರವಾಗಿ ಸಭೆ ನಡೆಸಿಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ನಾಲ್ಕು ತಿಂಗಳು ಬಿಬಿಎಂಪಿ ಮತ್ತು ಬಿಡಿಎ ಅಲ್ಲಿ ಹಲವು ಯೋಜನೆಗಳು ಸ್ಥಗಿತಗೊಂಡಿದ್ದವು. ವಿಧಾನಸಭೆ ಅಧಿವೇಶನ ಬರುತ್ತಿದೆ. ಸದ್ಯದಲ್ಲಿ ಜಿಲ್ಲಾಧಿಕಾರಿಗಳ ಸಭೆ ಇದೆ. ಹಾಗಾಗಿ, ಸ್ಥಗಿತಗೊಂಡ ಯೋಜನೆಗಳ ಬಗ್ಗೆ ಚರ್ಚೆ ನಡೆಸುವುದಕ್ಕೆ ಸಭೆ ನಡೆಸಲಾಗಿದೆ. ಬಹುತೇಕ ಯೋಜನೆಗಳ ಅಂತಿಮಗೊಂಡಿವೆ. ತಾವೇ ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಪ್ರಾತ್ಯಕ್ಷಿಕೆ ನೀಡಲಿದ್ದೇನೆ ಎಂದು ತಿಳಿಸಿದರು.ಧ ಸಭೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮುನೀಶ್ ಮೌದ್ಗೀಲ್, ಡಿಸಿಎಂ ಕಾರ್ಯದರ್ಶಿ ಹಾಗೂ ಬಿ ಎಂಆರ್ ಡಿಎ ಆಯುಕ್ತ ರಾಜೇಂದ್ರ ಚೋಳನ್ ಉಪಸ್ಥಿತರಿದ್ದರು.