ರೈತರಿಗೆ ಭರವಸೆ ನೀಡಿದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ

| Published : Jun 02 2024, 01:45 AM IST

ಸಾರಾಂಶ

ಅಮೀನಗಡ: ಅಮೀನಗಡದ ಬಿಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ ಅವರು ಪ್ರಧಾನ ವ್ಯವಸ್ಥಾಪಕರ ಜೊತೆಗೆ ಚರ್ಚಿಸಿ ಸೂಕ್ತ ಪರಿಹಾರದ ಭರವಸೆ ನೀಡಿದರು.

ಅಮೀನಗಡ: ಅಮೀನಗಡದ ಬಿಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ ಅವರು ಪ್ರಧಾನ ವ್ಯವಸ್ಥಾಪಕರ ಜೊತೆಗೆ ಚರ್ಚಿಸಿ ಸೂಕ್ತ ಪರಿಹಾರದ ಭರವಸೆ ನೀಡಿದರು. ಈ ವೇಳೆ ರೈತರು ಕೂಡ ತಮಗೆ ನ್ಯಾಯ ಒದಗಿಸುವಂತೆ ಮನವಿ ಕೂಡ ಅರ್ಪಿಸಿದರು.ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಣ ಮಾಡಿದ ಸಿಬ್ಬಂದಿಯೊಂದಿಗೆ ಖಾತೆದಾರರಿಗೂ ನೋಟಿಸ್ ನೀಡಿ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಅಮೀನಗಡ ಬಿಡಿಸಿಸಿ ಶಾಖೆಯ ಮುಂದೆ ರೈತ ಖಾತೆದಾರರು ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸರನಾಯಕ ಅವರು ಭೇಟಿ ನೀಡಿದರು.

ಶುಕ್ರವಾರ ಬಾಗಲಕೋಟೆಯಲ್ಲಿರುವ ಬಿಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷ ಅಜಯಕುಮಾರ ಸರನಾಯಕ ಪ್ರಕರಣ ವಿಚಾರಣೆ ನಡೆಸುತ್ತಿರುವ ಸಿಒಡಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಮಾಯಕ ಖಾತೆದಾರರಿಗೆ ಕಿರುಕುಳ ನೀಡದೆ, ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಹಾಗೂ ಯಾವುದೇ ಖಾತೆದಾರರಿಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ರೈತರು ಹೇಳಿದ್ದಾರೆ.

ಮನವಿ ಸಲ್ಲಿಸುವ ವೇಳೆ ದೇವರಾಜ ಕಮತಗಿ, ನಾಗೇಶ ಗಂಜೀಹಾಳ, ಅನಂದ ಮೊಕಾಶಿ,ಸತೀಶ ಪಾಟೀಲ, ನಾಗಲಿಂಗಪ್ಪ ಫರಾಳದ, ಈರಣ್ಣ ಫರಾಳದ ಇದ್ದರು.