ರಾಮನಗರ: ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) 18 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 15 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ರಾಮನಗರ: ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) 18 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 15 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ 2 ಕ್ಷೇತ್ರಗಳು, ಚನ್ನಪಟ್ಟಣದ 1, ಕನಕಪುರದ 2, ಮಾಗಡಿಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದು, ಅವರ ಕ್ಷೇತ್ರದಲ್ಲೂ ಕೈ ಅಭ್ಯರ್ಥಿ ಗೆದ್ದಿದ್ದಾರೆ.

ಬೆಂಗಳೂರು ಉತ್ತರ ಜಿಲ್ಲೆಯ ಹೊಸಕೋಟೆಯ 2, ದೇವನಹಳ್ಳಿಯಲ್ಲಿ 1, ದೊಡ್ಡಬಳ್ಳಾಪುರದಲ್ಲಿ 1, ಆನೇಕಲ್ ನಲ್ಲಿ 1, ಬೆಂಗಳೂರು ಉತ್ತರ ಕ್ಷೇತ್ರದಿಂದ 1 ಕ್ಷೇತ್ರದಲ್ಲಿ ಹಾಗೂ ಹೆಚ್. ಎಂ ರೇವಣ್ಣ ಅವರ ಸಹಕಾರದಿಂದ 1 ಇತರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಉಳಿದಂತೆ ನೆಲಮಂಗಲ ಹಾಗೂ ಸೋಲೂರು ಕ್ಷೇತ್ರಗಳ 2 ಸ್ಥಾನಗಳನ್ನು ಬಿಜೆಪಿ ಸಹಕಾರದೊಂದಿಗೆ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ.

ವಿಜೇತರ ಅಭಿನಂದಿಸಿ ಮಾತನಾಡಿದ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಹೆಚ್ ಮುನಿಯಪ್ಪ, ಕೃಷ್ಣ ಭೈರೇಗೌಡ ಹಾಗೂ ಶಾಸಕರಾದ ಶಿವಣ್ಣ, ಶರತ್ ಬಚ್ಚೇಗೌಡ, ಇಕ್ಬಾಲ್ ಹುಸೇನ್, ಬಾಲಕೃಷ್ಣ, ಸಿ.ಪಿ ಯೋಗೇಶ್ವರ್, ಶ್ರೀನಿವಾಸ್, ಮುಖಂಡರಾದ ಆರ್.ಕೆ. ರಮೇಶ್, ವೆಂಕಟರಮಣಪ್ಪಮತ್ತಿತರ ಮುಖಂಡರ ಸಹಕಾರದಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಡಳಿತ ಮಂಡಳಿಗೆ ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಸಹಕಾರ ನೀಡಿದ ಎಲ್ಲಾ ಸಹಕಾರಿ ಬಂಧುಗಳು, ಪಕ್ಷದ ಎಲ್ಲಾ ಮುಖಂಡರು, ಸಚಿವರು, ಶಾಸಕರು, ಪರಾಜಿತ ಅಭ್ಯರ್ಥಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಬಹಳ ಇತಿಹಾಸ ಇರುವ ಬ್ಯಾಂಕ್. ರಾಜಧಾನಿಯಲ್ಲಿರುವ ರಾಜ್ಯದ ಗಮನ ಸೆಳೆಯುವ ಬ್ಯಾಂಕ್ ಇದಾಗಿದ್ದು, ಅನೇಕ ಏಳು ಬೀಳು ಕಂಡಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಬ್ಯಾಂಕ್ ಉತ್ತಮ ಆಡಳಿತ ನಡೆಸಿಕೊಂಡು ಬಂದಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಟ್ಟು 36 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ಹೊಂದಿರುವ ಬ್ಯಾಂಕ್ ಇದಾಗಿದೆ ಎಂದರು.

7ಕೆಆರ್ ಎಂಎನ್ 6.ಜೆಪಿಜಿ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್)ನ ನಿರ್ದೇಶಕ ಸ್ಥಾನಗಳ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹಾಗೂ ಮುಖಂಡರು ಅಭಿನಂದಿಸಿದರು.