ಸಾರಾಂಶ
ನಮ್ಮ ಸಂಸ್ಥೆಯ ಪ್ರೌಢಶಾಲೆ ಹಾಗೂ ಡಿ.ಎಲ್.ಇಡಿ ಕಾಲೇಜಿನ ಹಳೆ ವಿದ್ಯಾರ್ಥಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಹಾಗೂ ಪ್ರೌಢಶಾಲೆಯ ಒಬ್ಬ ಶಿಕ್ಷಕ ತಾಲೂಕು ಮಟ್ಟದ ಆದರ್ಶ ಶಿಕ್ಷಕರಾಗಿ ಆಯ್ಕೆಯಾಗಿರುವುದು ಸಂಸ್ಥೆಯ ಮಹತ್ವ ಹೆಚ್ಚಾಗುವಂತೆ ಮಾಡಿದೆ. ಉತ್ತಮ ಸಾಧನೆ ಮೂಲಕ ಆದರ್ಶ ಶಿಕ್ಷಕರಾಗಬೇಕು ಎಂದು ಸಂಸ್ಥೆಯ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಸೈದಾಪುರ
ನಮ್ಮ ಸಂಸ್ಥೆಯ ಪ್ರೌಢಶಾಲೆ ಹಾಗೂ ಡಿ.ಎಲ್.ಇಡಿ ಕಾಲೇಜಿನ ಹಳೆ ವಿದ್ಯಾರ್ಥಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಹಾಗೂ ಪ್ರೌಢಶಾಲೆಯ ಒಬ್ಬ ಶಿಕ್ಷಕ ತಾಲೂಕು ಮಟ್ಟದ ಆದರ್ಶ ಶಿಕ್ಷಕರಾಗಿ ಆಯ್ಕೆಯಾಗಿರುವುದು ಸಂಸ್ಥೆಯ ಮಹತ್ವ ಹೆಚ್ಚಾಗುವಂತೆ ಮಾಡಿದೆ. ಉತ್ತಮ ಸಾಧನೆ ಮೂಲಕ ಆದರ್ಶ ಶಿಕ್ಷಕರಾಗಬೇಕು ಎಂದು ಸಂಸ್ಥೆಯ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಅಭಿಪ್ರಾಯಪಟ್ಟರು.ವಿದ್ಯಾವರ್ಧಕ ಡಿ.ಎಲ್.ಇಡಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡ ಸ್ವಾಗತ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಾಗಿ ಆಯ್ಕೆಯಾದ ಗೋವರ್ಧನ ಹಾಗೂ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ರಾಚಯ್ಯ ಸ್ವಾಮಿ ಬಾಡಿಯಾಲ ತಾಲೂಕು ಮಟ್ಟದ ಆದರ್ಶ ಶಿಕ್ಷಕರಾಗಿ ಆಯ್ಕೆಯಾಗಿರುವುದಕ್ಕೆ ಅವರನ್ನು ಸನ್ಮಾನಿಸಿ ಮಾತನಾಡಿದರು. ಉತ್ತಮ ಶಿಕ್ಷಕರು ನೀವಾಗಬೇಕೆಂದು ಹೇಳಿದರು.
ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ ಅಧ್ಯಕ್ಷತೆ ವಹಿಸಿದ್ದರು. ಸಹ ಕಾರ್ಯದರ್ಶಿ ಕೆ.ಬಿ.ಗೋವರ್ಧನ, ಕೋಶಾಧ್ಯಕ್ಷ ಮುಕುಂದಕುಮಾರ ಅಲಿಝಾರ, ಆಡಳಿತ ಮಂಡಳಿಯ ಸದಸ್ಯರಾದ ಸಿದ್ರಾಮಪ್ಪಗೌಡ ಗೊಂದಡಗಿ, ಸುರೇಶ ಆನಂಪಲ್ಲಿ, ಮುಖ್ಯಗುರು ಲಿಂಗಾರೆಡ್ಡಿ ನಾಯಕ, ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಗೋವರ್ಧನ, ತಾಲೂಕ ಮಟ್ಟದ ಆದರ್ಶ ಶಿಕ್ಷಕ ರಾಚಯ್ಯ ಸ್ವಾಮಿ ಬಾಡಿಯಾಳ, ಹಿರಿಯ ಶಿಕ್ಷಕರಾದ ಗೂಳಪ್ಪ ಎಸ್. ಮಲ್ಹಾರ, ಉಪನ್ಯಾಸಕರಾದ ಸಾಬಯ್ಯ ರಾಯಪ್ಪನೋರ, ಹಣಮರೆಡ್ಡಿ ಮೋಟ್ನಳ್ಳಿ, ಶ್ವೇತಾ ರಾಘವೇಂದ್ರ ಪೂರಿ, ಆನಂದ ಪಾಟೀಲ ಕೊಂಡಾಪುರ, ಮೀನಾಕ್ಷಿ ಸೇರಿದಂತೆ ಇತರರು ಇದ್ದರು.ಕಾವೇರಿ ಪ್ರಾರ್ಥಾನಾ ಗೀತೆ ಹಾಡಿದರು. ಅಂಜುಳಾ ಸ್ವಾಗತಿಸಿ, ಲಕ್ಷ್ಮೀ ನಿರೂಪಿಸಿದರು. ಸಿದ್ದಮ್ಮ ವಂದಿಸಿದರು.
ನಾನು ಕಲಿತ ಕಾಲೇಜಿನಲ್ಲಿ ಸನ್ಮಾನಿತನಾಗುತ್ತಿರುವುದು ಸಂತಸವನ್ನುಂಟು ಮಾಡಿದೆ. ಇದೊಂದು ಗ್ರಾಮೀಣ ಭಾಗದಲ್ಲಿ ಸೇವಾ ಮನೋಭಾವನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ. ನನ್ನ ಈ ವಿಧದ ಸಾಧನೆಗೆ ಗುರುಗಳ ಮಾರ್ಗದರ್ಶನವೂ ಕಾರಣ.ಗೋವರ್ಧನ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ
ವಿದ್ಯಾವರ್ಧಕ ಸಂಸ್ಥೆಯಲ್ಲಿ ಅಭ್ಯಾಸ ಮಾಡಿ, ಇಲ್ಲಿಯೇ ಶಿಕ್ಷಕನಾಗಿರುವುದು ನನ್ನ ಸೌಭಾಗ್ಯ. ತಾಲೂಕು ಆದರ್ಶ ಶಿಕ್ಷಕನಾಗಿ ಆಯ್ಕೆಯಾಗಿರುವುದು ಮತ್ತಷ್ಟು ಜವಾಬ್ದಾರಿ ಹೆಚ್ಚಾಗಿದೆ. ಇದಕ್ಕೆ ಸಂಸ್ಥೆಯ, ಮುಖ್ಯಗುರುಗಳ, ಶಿಕ್ಷಕರ ಸಲಹೆ, ಪಾಲಕರ ಸಹಕಾರವು ಕಾರಣವಾಗಿದೆ.ರಾಚಯ್ಯ ಸ್ವಾಮಿ ಬಾಡಿಯಾಲ, ತಾಲೂಕು ಮಟ್ಟದ ಆದರ್ಶ ಶಿಕ್ಷಕ