ಸಾರಾಂಶ
ಕನ್ನಡಪ್ರಭ ವಾರ್ತೆ ಸಿಂದಗಿ ಜಗತ್ತಿನ ಸೌಂದರ್ಯ ಸವಿಯಲು ಕಣ್ಣು ಅತಿಮುಖ್ಯ. ದೇಹದಲ್ಲಿ ಮೆದುಳಿನ ನಂತರ ಕಣ್ಣು ಅತೀ ಸೂಕ್ಷ್ಮ ಅಂಗ. ಕಣ್ಣಿನ ಆರೈಕೆಗೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು ಎಂದು ಆದಿಶೇಷ ಶ್ರೀಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಶ್ರೀಗಳು ಹೇಳಿದರು.
ಕನ್ನಡಪ್ರಭ ವಾರ್ತೆ ಸಿಂದಗಿ
ಜಗತ್ತಿನ ಸೌಂದರ್ಯ ಸವಿಯಲು ಕಣ್ಣು ಅತಿಮುಖ್ಯ. ದೇಹದಲ್ಲಿ ಮೆದುಳಿನ ನಂತರ ಕಣ್ಣು ಅತೀ ಸೂಕ್ಷ್ಮ ಅಂಗ. ಕಣ್ಣಿನ ಆರೈಕೆಗೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು ಎಂದು ಆದಿಶೇಷ ಶ್ರೀಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಶ್ರೀಗಳು ಹೇಳಿದರು.ಪಟ್ಟಣದ ಆದಿಶೇಷ ಸಂಸ್ಥಾನ ಹಿರೇಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಆದಿಶೇಷ ಸಂಸ್ಥಾನ ಹಿರೇಮಠದ ಜಾತ್ರಾ ಮಹೋತ್ಸವ-ಧರ್ಮಸಭೆ ನಿಮಿತ್ತ ಹಮ್ಮಿಕೊಂಡಿದ್ದ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿ, ಕಣ್ಣಿನ ಮುಂಜಾಗೃತ ಕ್ರಮಗಳು ಅತೀ ಮುಖ್ಯ. ಅದನ್ನು ಸರಿಯಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಿದರು.
ಡಾ.ಮಹಾಂತೇಶ ಹಿರೇಮಠ ಮಾತನಾಡಿ, ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥ ಡಾ.ಪ್ರಭುಗೌಡ ಬಿರಾದಾರ ಅವರು ಬಡವರ ಸಾಮಾಜಿಕ ಸೇವೆಯಲ್ಲಿ ದೇವರನ್ನು ಕಾಣಲು ಹೊರಟಿದ್ದಾರೆ. ಅವರ ಕುಟುಂಬದಲ್ಲಿ ಸುಮಾರು 8 ಜನ ಕಣ್ಣಿನ ತಜ್ಞರಿದ್ದಾರೆ. ಅವರೆಲ್ಲ ಬಡಜನರ ಸೇವೆಗೆ ಪಣ ತೊಟ್ಟಿದ್ದು, ಅವರ ಕುಟುಂಬಕ್ಕೆ ಆದಿಶೇಷ ಸಂಸ್ಥಾನ ಮಠದ ಆಶಿರ್ವಾದ ಇರಬೇಕು ಎಂದರು.ಪತ್ರಕರ್ತರ ಸಂಘದ ಅಧ್ಯಕ್ಷ ಪಂಡಿತ ಯಂಪೂರೆ ಮಾತನಾಡಿ, ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ ಎಂದರೆ ತಾತ್ಸಾರ ಮಾಡದೆ ಒಳ್ಳೆಯ ಮನಸ್ಸಿನಿಂದ ಈ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು.
ಈ ಶಿಬಿರದಲ್ಲಿ 50ಕ್ಕೂ ಅಧಿಕ ಜನರು ತಪಾಸನೆ ಮಾಡಿಸಿಕೊಂಡಿದ್ದು, 15 ಜನರು ಶಸ್ತ್ರ ಚಿಕಿತ್ಸೆಗೆ ಒಳಗಾದರು. ಸಾನಿಧ್ಯವನ್ನು ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳು ವಹಿಸಿದ್ದರು. ರಾಮನಗೌಡ ಮೊರಟಗಿ ಸ್ವಾಗತಿಸಿದರು. ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ಇದ್ದರು.