ನಿವೇಶನ ಖರೀದಿಸುವ ಮುನ್ನ ಜಾಗೃತರಾಗಿ: ಶಾಸಕ ಪ್ರಕಾಶ ಕೋಳಿವಾಡ

| Published : Aug 08 2024, 01:40 AM IST

ಸಾರಾಂಶ

ನಗರದಲ್ಲಿ ಅಕ್ರಮ ಲೆಔಟ್‌ಗಳ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ನಿವೇಶನ ಖರೀದಿಸುವ ಮುನ್ನ ಜಾಗೃತರಾಗಿರಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ರಾಣಿಬೆನ್ನೂರು: ನಗರದಲ್ಲಿ ಅಕ್ರಮ ಲೆಔಟ್‌ಗಳ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ನಿವೇಶನ ಖರೀದಿಸುವ ಮುನ್ನ ಜಾಗೃತರಾಗಿರಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ಲೆಔಟ್‌ಗಳಿಂದ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಎದುರಿಸಬೇಕಾಗಿದೆ. ಹೀಗಾಗಿ, ಸಾರ್ವಜನಿಕರು ನಿವೇಶನ ಖರೀದಿಸುವ ಮುನ್ನ ನಗರಸಭೆಯ ಉತಾರ, ನಗರ ಯೋಜನಾ ಪ್ರಾಧಿಕಾರದ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲನೆ ಮಾಡಬೇಕು ಎಂದರು.ತಾಲೂಕಿನಲ್ಲಿ ಆಡಳಿತವನ್ನು ಚುರುಕುಗೊಳಿಸುವ ಕೆಲಸ ನಿಟ್ಟಿನಲ್ಲಿ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳೊಂದಿಗೆ ಸಭೆ ಮಾಡಲಾಗುತ್ತಿದೆ. ಸರ್ಕಾರದ ಯೋಜನೆಗಳು ಎಲ್ಲರಿಗೂ ತಲುಪಬೇಕು ಎಂಬುದು ಮೂಲ ಉದ್ದೇಶವಾಗಿದೆ. ನಗರದಲ್ಲಿ ಹೆಚ್ಚುತ್ತಿರವ ಸಂಚಾರ ದಟ್ಟಣೆ ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಹೊಸದಾಗಿ ಅಧಿಕಾರ ಸ್ವೀಕರಿಸಿದ ನಗರಸಭೆ ಆಯುಕ್ತರು ಹಾಗೂ ತಹಸೀಲ್ದಾರ್ ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವುದು ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ಪಿಕೆಕೆ ಸಂಸ್ಥೆ ಹಾಗೂ ಐಎಂಎ ವತಿಯಿಂದ ನಗರದ ಸೌಂದರ್ಯ ಹೆಚ್ಚಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ಸಸಿಗಳನ್ನು ನೆಡಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದರು.

ತಹಸೀಲ್ದಾರ್ ಆರ್.ಎಚ್. ಭಾಗವಾನ್, ನಗರಸಭೆ ಆಯುಕ್ತ ಫಕ್ಕಿರಪ್ಪ ಇಂಗಳಗಿ, ತಾ.ಪಂ. ಇಒ ಸುಮಲತಾ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.