ಸಾರಾಂಶ
ಡೆಂಘೀ ಜ್ವರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎಚ್.ಕೆ.ಸುರೇಶ್,ಕ್ಷೇತ್ರ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಸುರಕ್ಷತಾ ಕ್ರಮ ಕೈಗೊಳ್ಳುವುದರ ಜತೆಗೆ ಈ ಬಗ್ಗೆ ಜನಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಜನರು ಕೂಡ ಎಚ್ಚರಿಕೆ ಇಂದಿರಬೇಕು ಎಂದರು.
ಬೇಲೂರು : ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಮತ್ತು ಡೆಂಘೀ ಒಂದು ಮಾರಕ ರೋಗವಾಗಿರುವುದರಿಂದ ಎಲ್ಲೆಡೆ ಎಚ್ಚರಿಕೆ ಕ್ರಮ ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ, ಪುರಸಭಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಪುರಸಭಾ ವತಿಯಿಂದ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಡೆಂಘೀ ಜ್ವರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡೆಂಘೀ ಬಗ್ಗೆ ಎಚ್ಚರ ಹಾಗೂ ಅರಿವು ಎಲ್ಲರಿಗೂ ಅಗತ್ಯವಾಗಿದೆ ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ಇದನ್ನು ನಿರ್ಲಕ್ಷಿಸುವಂತಿಲ್ಲ. ಕ್ಷೇತ್ರ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಸುರಕ್ಷತಾ ಕ್ರಮ ಕೈಗೊಳ್ಳುವುದರ ಜತೆಗೆ ಈ ಬಗ್ಗೆ ಜನಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಜನರು ಕೂಡ ಎಚ್ಚರಿಕೆ ಇಂದಿರಬೇಕು ಎಂದರು.
ಡೆಂಘೀ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣ ಕುರಿತು ಜನರಲ್ಲಿ ಪುರಸಭಾ ಮುಖ್ಯಾಧಿಕಾರಿ ಸುಜಯ್ ಜನರಿಗೆ ಕರ ಪತ್ರಗಳನ್ನು ನೀಡಿ ಜಾಗೃತಿ ಮೂಡಿಸಿದರು.
ಈ ಸಂಧರ್ಭದಲ್ಲಿ ರಾಷ್ಟ್ರೀಯ ತೆಂಗು ಮಂಡಳಿ ಉಪಾಧ್ಯಕ್ಷ ಬೆಣ್ಣೂರು ರೇಣುಕುಮಾರ್, ಪುರಸಭಾ ಮಾಜಿ ಅಧ್ಯಕ್ಷ ಹೆಚ್.ಎಂ.ದಯಾನಂದ್, ಪುರಸಭಾ ಮುಖ್ಯಾಧಿಕಾರಿ ಸುಜಯ್, ರೋಟರಿ ಕ್ಲಬ್ ಕಾರ್ಯದರ್ಶಿ ಬಿ.ಬಿ.ಶಿವರಾಜ್, ಪುರಸಭಾ ಆರೋಗ್ಯಾಧಿಕಾರಿ ಲೋಹಿತ್ ಸೇರಿದಂತೆ ಇನ್ನಿತರರು ಇದ್ದರು.