ಜವಾಬ್ದಾರಿ ಅರಿತು ಜಾಗೃಕತೆಯಿಂದ ಕೆಲಸ ನಿರ್ವಹಿಸಿ

| Published : Apr 14 2024, 01:51 AM IST

ಸಾರಾಂಶ

ಅಥಣಿ: ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಇತರೆ ಸಾಹಾಯಕ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಜಾಗೃಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಅಥಣಿ ತಹಸೀಲ್ದಾರ್‌ ವಾಣಿ.ಯು ಸೂಚಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಇತರೆ ಸಾಹಾಯಕ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಜಾಗೃಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಅಥಣಿ ತಹಸೀಲ್ದಾರ್‌ ವಾಣಿ.ಯು ಸೂಚಿಸಿದರು.

ಪಟ್ಟಣದಲ್ಲಿ ಅಥಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆ ಸಿಬ್ಬಂದಿ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಥಮ ಬಾರಿಗೆ ಚುನಾವಣೆಯ ಕರ್ತವ್ಯಕ್ಕೆ ನೇಮಕವಾಗಿರುವ ಸಿಬ್ಬಂದಿಗೆ ಏನೆ ಸಮಸ್ಯೆ ಇದ್ದರೂ ತರಬೇತಿ ಅವಧಿಯಲ್ಲಿ ತರಬೇತಿ ನೀಡುವುವರಿಂದ ಮುಕ್ತ ಮನಸ್ಸಿನಿಂದ ಚರ್ಚೆ ಮಾಡಿ ಗೊಂದಲಗಳನ್ನು ನಿವಾರಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಮಯದಲ್ಲಿ ತಾಲೂಕು ಪಂಚಾಯತಿ ಅಧಿಕಾರಿ ಸ್ವೀಪ್ ಸಮಿತಿ ಅಧ್ಯಕ್ಷ ಶಿವಾನಂದ ಕಲ್ಲಾಪುರ ಮಾತನಾಡಿ, ಮತದಾನ ದಿನ ಚುನಾವಣೆ ಕರ್ತವ್ಯಕ್ಕೆ ನಿಯೋಜಿತವಾಗಿರುವ ಸಿಬ್ಬಂದಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

ಚುನಾವಣೆ ಅಧಿಕಾರಿ ಬಿ.ಎಚ್.ಮಲ್ಲಿಕಾರ್ಜುನ, ಎಸ್.ಬಿ.ಮೆನಸಂಗಿ, ಎಂ.ಎಂ.ಮಿರ್ಜಿ, ಜಿ.ಎಸ್.ಮಠದ, ಸಹಾಯಕ ನಿದೇರ್ಶಕರು ಪಂಚಾಯತ್‌ ರಾಜ್ಯ ಉಪಸ್ಥಿತರಿದ್ದರು.