ಬೇಸಿಗೆಯಲ್ಲಿ ನೀರು, ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು : ಕೇಂದ್ರ ಸಚಿವ ಎಚ್ಡಿಕೆ

| N/A | Published : Mar 17 2025, 12:35 AM IST / Updated: Mar 17 2025, 12:07 PM IST

HD Kumaraswamy
ಬೇಸಿಗೆಯಲ್ಲಿ ನೀರು, ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು : ಕೇಂದ್ರ ಸಚಿವ ಎಚ್ಡಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು. ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು.

 ಮಳವಳ್ಳಿ : ತಾಲಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿ ಕಲುಷಿತ ಆಹಾರ ಸೇವಿಸಿ ಸಾವನ್ನಪ್ಪಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ತಹಸೀಲ್ದಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು. ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಎಂದು ತಹಸೀಲ್ದಾರ್ ಗೆ ಸೂಚಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದಾಗ ನನಗೆ ತೀವ್ರ ಆಘಾತ ಉಂಟಾಯಿತು. ಈ ವಸತಿ ಶಾಲೆಯಲ್ಲಿ ಬಹುತೇಕ ಹೊರರಾಜ್ಯಗಳ ಮಕ್ಕಳೇ ಇದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.ಮಾರ್ವಾಡಿಗಳು ಹೋಳಿ ಹಬ್ಬ ಪ್ರಯುಕ್ತ ಶುಕ್ರವಾರ ರಾತ್ರಿ ಊಟ ಮಾಡಿಸಿದ್ದರು. ಗೋಕುಲಂ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೂ ಅದೇ ಊಟ ವಿತರಿಸಲಾಗಿದೆ‌. ಮಾರನೇ ದಿನ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಶುರುವಾಗಿದೆ. ವೈದ್ಯರು ಚಿಕಿತ್ಸೆ ನೀಡಿ ಬಂದಿದ್ದರು. ಚೆನ್ನಾಗಿ ಓಡಾಡಿಕೊಂಡಿದ್ದ ವಿದ್ಯಾರ್ಥಿಯೊಬ್ಬ ಸಾವಪ್ಪಿದ್ದಾನೆ. ಪೋಸ್ಟ್ ಮಾರ್ಟಮ್‌‌ನಲ್ಲಿ ಸಾವಿಗೆ ಕಾರಣ ಗೊತ್ತಾಗುತ್ತದೆ.

- ಡಾ.ಮೋಹನ್, ಡಿಎಚ್‌ಒ ಮಂಡ್ಯ