ಮತದಾರ‌ಪಟ್ಟಿ ವಿಶೇಷ ಪರಿಷ್ಕರಣೆ ಸಭೆಯಲ್ಲಿ ಸಿ.ಟಿ.ರವಿ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮತದಾರಪಟ್ಟಿ ವಿಶೇಷ ಪರಿಷ್ಕರಣೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಬೇಕು ಎಂದು ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸೋಮವಾರ ಬಿಜೆಪಿ ನಗರ ಮಂಡಲದಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕುರಿತು ವಿಶೇಷ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿ ಬಿಎಲ್ಒ ಜೊತೆ ಸಂಪರ್ಕದಲ್ಲಿ ಇರಬೇಕು. ನ್ಯಾಯಯುತವಾಗಿರುವ ಮತದಾರರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು. ಅಕ್ರಮಗಳನ್ನು ತಡೆಯಬೇಕು ಎಂದು ಹೇಳಿದರು.ಮ್ಯಾಪಿಂಗ್ ಮಾಡಿರುವುದು ಸರಿ ಇಲ್ಲ ಎಂದರೆ ಅಥವಾ ಅನುಮಾನಗಳು ಬಂದರೆ ದೂರು ದಾಖಲಿಸಬೇಕು. ಅಕ್ರಮಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಸಲಹೆ ಮಾಡಿದರು.ಎಲ್ಲಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಜಾಗೃತರಾಗಿ ಈ ಪರಿಷ್ಕರಣೆಯಲ್ಲಿ ಭಾಗವಹಿಸಬೇಕು. ಈ ಸಂದರ್ಭದಲ್ಲಿ ಎಚ್ಚರಿಕೆ ವಹಿಸದಿದ್ದರೆ ಸಮಸ್ಯೆಗಳು ಸೃಷ್ಟಿಯಾಗುತ್ತವೆ ಎಂದು ಕಿವಿಮಾತು ಹೇಳಿದರು.ಜಿಲ್ಲಾ ಬಿಜೆಪಿ ಎಸ್ಐ ಆರ್ ಉಸ್ತುವಾರಿ ಸೀತಾರಾಮ ಭರಣ್ಯ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ. ಎಸ್. ಪುಷ್ಪರಾಜ್ ಮಾತನಾಡಿದರು. ನಗರಸಭೆ ಮಾಜಿ ಅಧ್ಯಕ್ಷೆ ಕವಿತಾ ಶೇಖರ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಕೌಶಿಕ್, ಬಸವರಾಜ್ ಉಪಸ್ಥಿತರಿದ್ದರು.ಫೋಟೋ

ಚಿಕ್ಕಮಗಳೂರಿನಲ್ಲಿ ಸೋಮವಾರ ಬಿಜೆಪಿ ನಗರ ಮಂಡಲದಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕುರಿತು ವಿಶೇಷ ಸಭೆ ನಡೆಸಲಾಯಿತು. ಈವೇಳೆ ಎಂಎಲ್ ಸಿ ಸಿ.ಟಿ.ರವಿ, ಜಿಲ್ಲಾ ಬಿಜೆಪಿ ಎಸ್ಐ ಆರ್ ಉಸ್ತುವಾರಿ ಸೀತಾರಾಮ ಭರಣ್ಯ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ. ಎಸ್. ಪುಷ್ಪರಾಜ್, ನಗರಸಭೆ ಮಾಜಿ ಅಧ್ಯಕ್ಷೆ ಕವಿತಾ ಶೇಖರ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಕೌಶಿಕ್, ಬಸವರಾಜ್ ಉಪಸ್ಥಿತರಿದ್ದರು.