ದಾಂಪತ್ಯದಲ್ಲಿ ಬಿರುಕು ಮೂಡದಂತೆ ಎಚ್ಚರವಹಿಸಿ

| Published : Oct 06 2024, 01:30 AM IST

ದಾಂಪತ್ಯದಲ್ಲಿ ಬಿರುಕು ಮೂಡದಂತೆ ಎಚ್ಚರವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ದಾಂಪತ್ಯದಲ್ಲಿ ಬಿರುಕು ಮೂಡದಂತೆ ಎಚ್ಚರ ವಹಿಸುವುದು ಅಗತ್ಯವೆಂದು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗದಾಂಪತ್ಯದಲ್ಲಿ ಬಿರುಕು ಮೂಡದಂತೆ ಎಚ್ಚರ ವಹಿಸುವುದು ಅಗತ್ಯವೆಂದು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.ಮುರುಘಾಮಠದ ಅನುಭವಮಂಟಪದಲ್ಲಿ ಶನಿವಾರ ಆಯೋಜಿಸಿದ್ದ 34 ನೇ ವರ್ಷದ ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಾನವನಿಗೆ ಎರಡು ಕಣ್ಣುಗಳಿದ್ದರೂ ದೃಷ್ಟಿ ಮಾತ್ರ ಒಂದೇ ಇರುತ್ತದೆ. ಅದೇ ರೀತಿ ಸತಿಪತಿಗಳ ಸಂಸಾರದಲ್ಲಿ ಸುಖ, ದುಖಃವಿರಲಿ. ಒಂದೇ ಮನಸ್ಸಿನಿಂದ ಸ್ವೀಕರಿಸುತ್ತಾ ಹಸನಾದ ಬದುಕನ್ನು ಕಟ್ಟಿಕೊಳ್ಳಿ ಎಂದರು. ಮೈಸೂರು ಜಾಗತಿಕ ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಮಹಾದೇವಪ್ಪ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಸಮಾಜದ ಹಲವು ಮೌಢ್ಯಗಳನ್ನು ಕಳೆದು ಸಮಸಮಾಜ ನಿರ್ಮಾಣ ಮಾಡಿದ್ದರು. ಕಲ್ಯಾಣ ಮಹೋತ್ಸವದ ಉದ್ದೇಶವೇ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದಾಗಿದೆ. ಆಡಂಬರಕ್ಕಿಂತ ಆದರ್ಶ ಮುಖ್ಯ. ಎರಡು ಮನಸ್ಸು, ಎರಡು ಹೃದಯಗಳ ಸಮ್ಮಿಲನವೇ ಸಂಸಾರವಾಗಬೇಕು ಎಂದು ತಿಳಿಸಿದರು.ಎಸ್ ಜೆಎಂ ವಿದ್ಯಾಪೀಠದ ಆಡಳಿತಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮಿಗಳು, ಛಲವಾದಿ ಗುರುಪೀಠದ ಬಸವನಾಗಿ ದೇವ ಸ್ವಾಮಿಗಳು, ಮರುಳ ಶಂಕರದೇವರ ಗುರುಪೀಠದ ಶ್ರೀ ಸಿದ್ದಬಸವ ಕಬೀರ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಭರಮಸಾಗರದ ಟಿ.ಆರ್. ಚನ್ನೇಶ್, ಎನ್.ಟಿ. ಬಸಣ್ಣ, ಹಾವೇರಿ ಬಸವ ಕೇಂದ್ರದ ಶೋಭಾತಾಯಿ ಮಾಗಾವಿ ಉಪಸ್ಥಿತರಿದ್ದರು. ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಜಿ. ಸಿದ್ಧಲಿಂಗ ಪ್ರಸಾದ್‍ರವರನ್ನು ಸನ್ಮಾನಿಸಲಾಯಿತು. ಕಲ್ಯಾಣ ಮಹೋತ್ಸವದಲ್ಲಿ ಮೂರು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.