ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗಣ್ಯರು, ಅತಿಥಿಗಳು, ಸನ್ಮಾನಿತರು, ಸಾಧಕರು ಸೇರಿದಂತೆ ಸಮ್ಮೇಳನಕ್ಕೆ ಆಗಮಿಸುವ ಗಣ್ಯರಿಗೆ ಶಿಷ್ಟಾಚಾರ ಪಾಲನೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಎಲ್ಲಾ ಸಮಿತಿಗಳೊಂದಿಗೆ ಸಮನ್ವಯತೆ ಕಾಯ್ದುಕೊಳ್ಳಬೇಕು. ಸಮ್ಮೇಳನಕ್ಕೆ ಆಗಮಿಸುವ ಗಣ್ಯರಿಗೆ ಆಸನ, ವಾಹನ, ಊಟ, ವಸತಿ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳು ಸೂಕ್ತ ರೀತಿಯಲ್ಲಿ ನೆರವೇರಬೇಕು ಎಂದರು.
ಸನ್ಮಾನಿತರಿಗೆ ನೀಡುವ ಸ್ಮರಣಿಕೆ ಸೂಕ್ತ ರೀತಿಯಲ್ಲಿ ತಲುಪಿಸಬೇಕು. ತಂಡಗಳ ರಚನೆ ಮಾಡಿಕೊಂಡು ಕೆಲಸ ಮಾಡಬೇಕು. ವಸ್ತ್ರಸಂಹಿತೆ ಪಾಲನೆ ಆಗಬೇಕು. ಸಮ್ಮೇಳನದಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಸದಂತೆ ನೋಡಿಕೊಳ್ಳಬೇಕು. ಮೈಕ್, ಲೈಟ್, ಸೌಂಡ್ ವ್ಯವಸ್ಥೆಯಲ್ಲಿ ಎಲ್ಲೂ ಆಭಾಸವಾಗದಂತೆ ನೋಡಿಕೊಳ್ಳಬೇಕು ಎಂದರು.ಸನ್ಮಾನಿತರು, ಗಣ್ಯರ ಪಟ್ಟಿಯನ್ನು ಮೊದಲೇ ಸಿದ್ಧಪಡಿಸಿಕೊಳ್ಳಬೇಕು. ಸನ್ಮಾನಿತರು, ಗಣ್ಯರಿಗೆ ಪ್ರತ್ಯೇಕ ವಿಐಪಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗೊಂದಲಕ್ಕೆ ಒಳಗಾಗದೆ ಗಣ್ಯರನ್ನು ಗೌರವಯುತವಾಗಿ ಸತ್ಕರಿಸಬೇಕು. ಒಂದು ವೇಳೆ ಲೋಪಗಳು ಕೇಳಿಬಂದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದರು.
ಆಹಾರ ಗುಣಮಟ್ಟ ಪರೀಕ್ಷೆ ಸಮಿತಿಯವರು ಪ್ರತಿ ಹಂತದಲ್ಲಿ ಮಾದರಿ ಪರೀಕ್ಷೆಗೆ ಒಳಪಡಿಸಿ ವರದಿಯನ್ನು ನೀಡಬೇಕು. ಸ್ಥಳದಲ್ಲೇ ಇದ್ದು ಗುಣಮಟ್ಟದ ಪರಿಶೀಲನೆ ನಡೆಸಬೇಕು ಎಂದರು.ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್ ಮಾತನಾಡಿ, ಸನ್ಮಾನಿತರ ಫೋಟೋ ಲಿಸ್ಟ್ ಸಿದ್ಧಪಡಿಸಿಕೊಂಡು ಅವರೊಂದಿಗೆ ಸಂಪರ್ಕದಲ್ಲಿರಬೇಕು. ಅವರನ್ನು ಕರೆತರುವುದು ಬೀಳ್ಕೊಡುವ ಪ್ರತಿ ಜವಾಬ್ದಾರಿ ಸಂಬಂಧಿಸಿದ ಅಧಿಕಾರಿಗಳದ್ದಾಗಿರುತ್ತದೆ. ಗಂಭೀರತೆಯನ್ನು ಅರಿತು ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
ಇಂದು, ನಾಳೆ ವಿದ್ಯುತ್ ವ್ಯತ್ಯಯಮದ್ದೂರು: ತಾಲೂಕಿನ ಬೆಸಗರಹಳ್ಳಿ 66/11 ಕೆ.ವಿವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.17 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಲಿಗಲಿದೆ. ತಾಲೂಕಿನ ಕೋಣಶಾಲೆ ಮರಳಿಗ ಬೆಸಗರಹಳ್ಳಿ ಮಾರಸಿಂಗನಹಳ್ಳಿ ಹೊಸಕೆರೆ ಬೆಳತೂರು ಹಾಗೂ ಚಾಪುರ ದೊಡ್ಡಿ ಗ್ರಾಮಗಳ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುವುದು ಹಾಗೂ ಕೊಪ್ಪ ಶಾಖೆಯ ರಾಷ್ಟ್ರೀಯ 66 /11 ಕೆ ವಿ ದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.18 ರಂದು ಬೆಳಗ್ಗೆ 9 ರಿಂದ ಸಂಜೆ 5:30ರ ವರೆಗೆ ಕೊಪ್ಪ, ಹೊಸಗಾವಿ, ಕೌಡ್ಲೆಸ ಬೆಕ್ಕಳೆಲೆ, ನಂಬಿನಾಯಕನಹಳ್ಳಿ, ಬಿದರಕೋಟೆ, ಆಬಲವಾಡಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ.