ಸಾರಾಂಶ
ಶಂಕಿತ ಡೆಂಘೀ ಜ್ವರ ಪ್ರಕರಣಗಳ ಪರೀಕ್ಷೆ ಹಾಗೂ ಚಿಕಿತ್ಸೆಯು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ. ಈ ವೈರಸ್‌ಗೆ ಯಾವುದೇ ನಿರ್ದಿಷ್ಟ ಔಷಧ ಅಥವಾ ಚಿಕಿತ್ಸೆ ಇಲ್ಲ. ಆದರೆ, ಜ್ವರದ ಚಿಕಿತ್ಸಾ ರೋಗಲಕ್ಷಣಗಳ ನಿರ್ವಹಣೆ ಒಳಗೊಂಡಿದೆ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಡೆಂಘೀ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆ ಬಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಡೆಂಘೀ ದಿನವನ್ನು ಆಚರಿಸಲಾಗುತ್ತದೆ ಎಂದು ಬಂಡಿಹೊಳೆ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪುನೀತ್ ತಿಳಿಸಿದರು.ತಾಲೂಕಿನ ಬಂಡಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂಘೀ ದಿನವನ್ನು ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಪ್ರತಿ ವರ್ಷ ಡೆಂಘೀಗೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಡೆಂಘೀ ಸಾಂಕ್ರಾಮಿಕ ರೋಗವಾಗಿದ್ದು, ಈಡೀಸ್ ಈಜಿಪ್ಟ್ ಎನ್ನುವ ಸೊಳ್ಳೆ ಕಡಿತದ ಬರುತ್ತದೆ ಎಂದರು.
ತೀವ್ರ ಜ್ವರ, ತಲೆನೋವು, ಕಣ್ಣುಗಳ ಹಿಂದೆ ನೋವು, ಸ್ನಾಯು ಮತ್ತು ಕೀಲು ನೋವು, ಮೂಳೆ ಮುರಿಯುವ ಜ್ವರ, ವಾಕರಿಕೆ ಮತ್ತು ವಾಂತಿ, ದದ್ದುಗಳಂಥಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಡೆಂಘೀ ಜ್ವರವನ್ನು ರಕ್ತ ಪರೀಕ್ಷೆಯಿಂದ ಮಾತ್ರ ಕಂಡು ಹಿಡಿಯಬಹುದು ಎಂದರು.ಶಂಕಿತ ಡೆಂಘೀ ಜ್ವರ ಪ್ರಕರಣಗಳ ಪರೀಕ್ಷೆ ಹಾಗೂ ಚಿಕಿತ್ಸೆಯು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ. ಈ ವೈರಸ್‌ಗೆ ಯಾವುದೇ ನಿರ್ದಿಷ್ಟ ಔಷಧ ಅಥವಾ ಚಿಕಿತ್ಸೆ ಇಲ್ಲ. ಆದರೆ, ಜ್ವರದ ಚಿಕಿತ್ಸಾ ರೋಗಲಕ್ಷಣಗಳ ನಿರ್ವಹಣೆ ಒಳಗೊಂಡಿದೆ ಎಂದರು.
ಈಡಿಸ್ ಲಾರ್ವಾ ಸಮೀಕ್ಷೆಗಾಗಿ ಮನೆಗಳಿಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಸಹಕಾರ ನೀಡಿ ಅವರು ನೀಡುವ ಸಲಹೆ ಪಾಲಿಸಬೇಕು ಎಂದರು.ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳು , ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಹಾಜರಿದ್ದರು.